ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಫರೀದಾಬಾದ್: ಹಾಡಹಗಲೇ, ಕಾಲೇಜೊಂದರ ಎದುರಿನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಶೂಟ್ ಮಾಡಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಯುವತಿಯನ್ನು ನಿಕಿತಾ(21) ಎಂದು ಗುರುತಿಸಲಾಗಿದ್ದು, ಭೀಕರ ಹತ್ಯೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಿನ್ನೆ ಮಧ್ಯಾಹ್ನ ಕಾಲೇಜಿನ ಎದುರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಯೊಬ್ಬ ನಿಕಿತಾಳನ್ನು ಅಪಹರಿಸಲು ಯತ್ನಿಸಿದ್ದಾನೆ. ಆದರೆ, ಅದು ಸಾಧ್ಯವಾಗದೇ ಇದ್ದಾಗ ಆಕೆಯ ಮೇಲೆ ಗುಂಡಿನ ಮಳೆಗರೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಆಕೆ ಕೊನೆಯುಸಿಳೆದಿದ್ದಾಳೆ.
ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಯ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post