ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ (Teachers Constituency Election) ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ನೋಂದಾಯಿತ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರ ರಜೆ ಘೋಷಿಸಿದೆ. ಈ ಕುರಿತು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಬಳ್ಳಾರಿ (Ballari) ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಮಾಹಿತಿ ನೀಡಿದ್ದು, ಅ.23ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕ್ಷೇತ್ರದಾದ್ಯಂತ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.
ನೋಂದಾಯಿತ ಮತದಾರರಿಗೆ ರಜೆ
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿರುವ ಮತದಾರರು ಯಾವುದೇ ತೊಂದರೆಯಿಲ್ಲದೆ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಅಕ್ಟೋಬರ್ 23ರಂದು ರಜೆ ಘೋಷಿಸಲಾಗಿದೆ.
Also Read>> ಬಳ್ಳಾರಿ | ಮಾನವ ದಿನಗಳ ಸೃಜನೆಯಲ್ಲಿ ರಾಜ್ಯದಲ್ಲೇ 3ನೇ ಸ್ಥಾನ; ಸಂಡೂರು ಮುಂಚೂಣಿ
ಚುನಾವಣೆಗೆ ಕ್ಷೇತ್ರದಾದ್ಯಂತ ಒಟ್ಟು 144 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮತದಾನ ಕೇಂದ್ರಗಳು ಇರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಿಗೂ ಅ.23ರಂದು ರಜೆ ಘೋಷಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
Ballari : ಅ.27ರಂದು ಮತ ಎಣಿಕೆ
ಚುನಾವಣೆಯ ಮತ ಎಣಿಕೆ ಕಾರ್ಯ ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಯಿಂದ ಬಳ್ಳಾರಿ ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ಅಂದು ಗಣಿತ ವಿಭಾಗದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಭದ್ರತಾ ಕೊಠಡಿಯ ಸಿಬ್ಬಂದಿಗೂ ರಜೆ ಘೋಷಿಸಲಾಗಿದೆ ಎಂದು ಜಹೀರಾ ನಸೀಮ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












