ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಚೆಕ್‍ಪೋ ಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಬುಧವಾರ ಅನಧಿಕೃತವಾಗಿ ಸಾಗಿಸುತ್ತಿದ್ದ 20,46,698 ರೂ. ಮೌಲ್ಯದ 9088.71 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಿಂದ 9078.54 ಲೀಟರ್ (20,41,931 ರೂ. ಬೆಲೆಯ) ಮದ್ಯ ಮತ್ತು ಪೊಲೀಸ್ ಇಲಾಖೆಯಿಂದ 10.17 ಲೀಟರ್ (4,767 ರೂ. ಬೆಲೆಯ) ಮದ್ಯ ವಶಪಡಿಸಿಕೊಳ್ಳಲಾಗಿದೆ.
ಈಗಾಗಲೇ ವಶಪಡಿಸಿಕೊಂಡಿದ್ದ 2,83,500 ರೂ. ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ, ಎಸ್‍ಎಸ್‍ಟಿ ಹಾಗೂ ಪೊಲೀಸ್ ತಂಡಗಳ ಪರಿಶೀಲನೆ ನಡೆಸಿ, ಜಿಲ್ಲಾ ಹಣ ಬಿಡುಗಡೆ ಸಮಿತಿಯಿಂದ ಸಂಬಂಧಪಟ್ಟವರಿಗೆ ಬಿಡುಗಡೆ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ 2 ಪ್ರಕರಣಗಳು ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
Also read: ಬಾಗಲಕೋಟೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರಿಗೆ ಮಮತೆಯ ಕರೆಯೋಲೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post