ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಶಾಲೆಗೆ ತೆರಳುತ್ತಿರುವಾಗಲೇ 6ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.
ಕಾಳಂಗೇರಿಯ ದೀಕ್ಷಾ (12) ಮೃತ ಬಾಲಕಿ. 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಇಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ದೀಕ್ಷಾಳನ್ನ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post