ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ಎ2 ಆರೋಪಿ ನಟ ದರ್ಶನ್’ಗೆ #Darshan ಚಿಕಿತ್ಸೆಗಾಗಿ ಆರು ವಾರಗಳ ಕಾಲ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನ್ಯಾಯಾಲಯ ವಿಧಿಸಿದ್ದ ಎಲ್ಲ ಷರತ್ತುಗಳನ್ನು ದರ್ಶನ್ ಕುಟುಂಬಸ್ಥರು ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬಳ್ಳಾರಿ ಜೈಲಿನಿಂದ ಅವರು ಬಿಡುಗಡೆಗೊಂಡಿದ್ದಾರೆ.
ಪತಿ ಬಿಡುಗಡೆ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ #Vijayalakshmi ಸ್ವತಃ ಜೈಲಿಗೆ ಆಗಮಿಸಿದ್ದರು. ಇಬ್ಬರೂ ಒಂದೇ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
Also read: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಅಪಘಾತ | ಮಹಿಳೆ ಸಾವು
ಸಂಜೆ 6 ಗಂಟೆ ವೇಳೆಗೆ ಜೈಲಿನಿಂದ ಹೊರಬಂದ ದರ್ಶನ್, ಪತ್ನಿ ಕುಳಿತಿದ್ದ ಕಾರಿನಲ್ಲಿ ಕುಳಿತು ಪ್ರಯಾಣ ಆರಂಭಿಸಿದ್ದಾರೆ. ಚಳ್ಳಕೆರೆ-ತುಮಕೂರು ಮಾರ್ಗವಾಗಿ ರಾತ್ರಿ 12 ಗಂಟೆ ವೇಳೆಗೆ ದರ್ಶನ್ ಬೆಂಗಳೂರು ತಲುಪುವ ನಿರೀಕ್ಷೆಯಿದೆ.
ಈ ಮೊದಲು ಬಳ್ಳಾರಿಯಿಂದ ಆಂಧ್ರದ ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಅದರೆ, ಕೊನೆಯ ಗಳಿಗೆಯಲ್ಲಿ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.
ಇನ್ನು, ದರ್ಶನ್ ಭದ್ರತೆ ದೃಷ್ಠಿಯಿಂದ ಬಳ್ಳಾರಿ ಜಿಲ್ಲೆಯ ಗಡಿ ದಾಟುವರೆಗೂ 50 ಪೊಲೀಸರನ್ನು ಒಳಗೊಂಡ ತಂಡದ ಭದ್ರತೆ ಒದಗಿಸಲಾಗಿದೆ.
ದರ್ಶನ್’ಗೆ ಆರೋಗ್ಯ ಕಾರಣದಿಂದ 6 ವಾರಗಳ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳನ್ನು ಮುಗಿದರೆ ಇಂದು ಸಂಜೆಯೇ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕೋರ್ಟ್ ನಿರ್ದಿಷ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ಹೇಳಿಲ್ಲ. ದರ್ಶನ್ ಅವರು ಈ ಹಿಂದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಅಪೋಲೋ ಆಸ್ಪತ್ರೆಗೆ ತೆರಳುತ್ತಾರೋ ಅಥವಾ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೋ ಎನ್ನುವುದು ಅವರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post