ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy Murder Case ಸಂಬಂಧಪಟ್ಟಂತೆ ಜೈಲು ವಾಸ ಅನುಭವಿಸುತ್ತಿರುವ ನಟ ದರ್ಶನ್‌ರ #Darshan ಜಾಮೀನು ಅರ್ಜಿ ವಿಚಾರಣೆ ತೀರ್ಪನನ್ನು ಕೋರ್ಟ್ ನಾಳೆಗೆ ಕಾಯ್ದಿರಿಸಿದೆ.
ನಟ ದರ್ಶನ್‌ರ ಆರೋಗ್ಯ ಸಮಸ್ಯೆಯನ್ನು ಗುರಿಯಾಗಿಟ್ಟುಕೊಂಡು ಜಾಮೀನು ಕೇಳಲಾಗಿದ್ದು, ಈ ಸಂಬಂಧ ಹಿರಿಯ ವಕೀಲ ಸಿವಿ ನಾಗೇಶ್ ಇಂದು ಕೋರ್ಟ್ ನಲ್ಲಿ ತಮ್ಮ ವಾದ ಮಂಡಿಸಿದರು. ದರ್ಶನ್‌ಗೆ ಗಂಭೀರ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವಾದಿಸಿದರು.
ಅರ್ಜಿದಾರರ ದೇಹದಲ್ಲಿ ಸಮರ್ಪಕವಾಗಿ ರಕ್ತಪರಿಚಲನೆ ಆಗುತ್ತಿಲ, ಪಾದಗಳಲ್ಲಿ ಮರಗಟ್ಟುವಿಕೆ ಸಮಸ್ಯೆ ಇದೆ. ಕಾಲಿನಲ್ಲಿ ನರದ ತೊಂದರೆ ಉಂಟಾಗಿದ್ದು, ಈಗಾಗಲೇ ಸ್ವಲ್ಪ ಮಟ್ಟಿಗೆ ಪಾದ ಸ್ಪರ್ಶ ಕಳೆದುಕೊಂಡಿದ್ದಾರೆ. ಹೀಗಿರುವಾಗ ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಫಲವಾದರೆ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಡಬಹುದು. ವೈದ್ಯಕೀಯ ವರದಿಯೂ ಅವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಅಧಿಕವಾಗಿದೆ. ಹಾಗಾಗಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು ಎಂದಿದ್ದಾರೆ. ಇವೆಲ್ಲವನ್ನೂ ಗಮನಿಸಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
Also read: ಮಕ್ಕಳ ಪ್ರತಿಭೆ ಗುರುತಿಸುವುದು ನಮ್ಮೆಲ್ಲರ ಕರ್ತವ್ಯ: ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಚಬ್ಬಿ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್, ದರ್ಶನ್ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದರು. ವೈದ್ಯಕೀಯ ವರದಿಯಲ್ಲಿ ಪಾರ್ಶ್ವವಾಯುಗೆ ತುತ್ತಾಗುತ್ತಾರೆ ಎಂದಿಲ್ಲ, ತುತ್ತಾಗಲೂಬಹುದು ಎಂದು ವೈದ್ಯರು ಅಂದಾಜಿಸಿದ್ದಾರಷ್ಟೇ ಎಂದರು.
ಈ ವೇಳೆ ನ್ಯಾಯಪೀಠ, ಏನು ನಿಮ್ಮ ಮಾತಿನ ಅರ್ಥ? ಅರ್ಜಿದಾರರು ಅನಾರೋಗ್ಯದ ಅಂತಿಮ ಹಂತಕ್ಕೆ ತಲುಪುವವರೆಗೆ ಕಾಯಬೇಕು ಎನ್ನುವುದೇ ಎಂದು ಪ್ರಶ್ನಿಸಿತ್ತು.
ವಾದ-ಪತ್ರಿವಾದ ಆಲಿಸಿದ ನ್ಯಾಯಪೀಠ ಅರ್ಜಿಯ ತೀರ್ಪನ್ನು ನಾಳೆಗೆ ಪ್ರಕಟಿಸುವುದಾಗಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post