ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ #Agniveer ನೇಮಕಾತಿ ರ್ಯಾಲಿ ನಡೆಯಲಿದೆ.
ಈ ರ‍್ಯಾಲಿಗೆ ಜೂ. 30 ರಿಂದ ಜು.10 ರವೆರೆಗೆ ನಡೆದ ಆನ್’ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುಗಾಗಿದೆ.
ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್’ಸೈಟ್’ನಲ್ಲಿ ವಿಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ(ಪ್ರ) ಡಾ.ಸಿ.ಎ. ಹಿರೇಮಠ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















