ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಶ್ರೀಶೈಲ ಮಹಾಕ್ಷೇತ್ರದಲ್ಲಿ Shri Shaila ಮಾ.01 ರಿಂದ 11 ರ ವರೆಗೆ ಮಹಾಶಿವರಾತ್ರಿ ಬ್ರಹ್ಮೋತ್ಸವ ಅಂಗವಾಗಿ ಸ್ವಾಮಿಯ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಉಪಕಲೆಕ್ಟರ್ ಡಿ.ಪೆದ್ದಿರಾಜು ಅವರು ತಿಳಿಸಿದ್ದಾರೆ.
ಬ್ರಹ್ಮೋತ್ಸವದಲ್ಲಿ ಭಕ್ತರ ದಟ್ಟಣೆಯಿಂದ ಮಾ.01 ರಿಂದ 11 ರ ವರೆಗೆ ಶ್ರೀ ಸ್ವಾಮಿಯವರ ಅಲಂಕಾರ ದರ್ಶನ ಮಾತ್ರ ಕಲ್ಪಿಸಲಾಗುತ್ತದೆ. ಭಕ್ತರಿಗಾಗಿ ಉಚಿತ ದರ್ಶನವಲ್ಲದೆ ಶೀಘ್ರ ದರ್ಶನ ಮತ್ತು ಅತಿ ಶೀಘ್ರ ದರ್ಶನಗಳಿಗೆ ಕೂಡ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Also read: ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ
ಬ್ರಹ್ಮೋತ್ಸವಗಳ ಪ್ರಾರಂಭದಲ್ಲಿ ಐದು ದಿವಸಗಳು ಮಾ.01 ರಿಂದ 05 ರ ವರೆಗೆ ಜ್ಯೋತಿರ್ಮುಡಿ (ಇರುಮುಡಿ) ಇರುವ ಶಿವದೀಕ್ಷಾ ಭಕ್ತರಿಗೆ ಹಂತ ಹಂತವಾಗಿ ನಿರ್ದಿಷ್ಟ ಸಮಯಗಳಲ್ಲಿ ಮಾತ್ರವೇ ಸ್ವಾಮಿಯವರ ಉಚಿತ ಸ್ಪರ್ಶ ದರ್ಶನ ಕಲ್ಪಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post