ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ #Yamaha ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರಿಯಾಗಿ ಹೊತ್ತಿಕೊಂಡಿದೆ. ಚೆನೈಯಿಂದ ಬಳ್ಳಾರಿಗೆ ಬೈಕ್‌ಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.
ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಈ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















