ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ವಿರಾಟ್ (4) ಮೃತ ಬಾಲಕ. ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
Also read: ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ: ಓರ್ವನ ಬಂಧನ

ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸುದ್ದಿ ತಿಳಿದು ಹೊಸಪೇಟೆ ಶಾಸಕ ಹೆಚ್‌ಆರ್ ಗವಿಯಪ್ಪ ಆಸ್ಪತ್ರೆಗೆ ದೌಡಾಯಿಸಿ ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post