ಕಲ್ಪ ಮೀಡಿಯಾ ಹೌಸ್
ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು.
ಬಳ್ಳಾರಿಯ ವಿಮ್ಸ್ ಸಭಾಂಗಣದಲ್ಲಿ ನಡೆದ ಕೋವಿಡ್ ತುರ್ತು ಪರಿಸ್ಥಿತಿ ಸಭೆಯಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚೆಯನ್ನು ನಡೆಸಲಾಯಿತು. ಜಿಲ್ಲೆಯು ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿದೆ. ಆ ಕಡೆಯಿಂದ ಬರುವ ಮಾರ್ಗಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಿ ಜನರ ತಪಾಸಣೆ ನಡೆಸಬೇಕು ಎಂದು ಸಚಿವರು ಸೂಚಿಸಿದರು.
ಸೋಂಕು ತಗುಲಿ ಹೋಂ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ತೀವ್ರ ನಿಗಾವಹಿಸಿ. ಅವರನ್ನು ಹೊರಗೆ ತಿರುಗಾಡದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದೇ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಬಳ್ಳಾರಿ ಮತ್ತು ಹೊಸಪೇಟೆ ನಗರಗಳಲ್ಲಿ ಜಾರಿ ಮಾಡಲಾಗಿರುವ ಕೊರೋನಾ ಕರ್ಫ್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದ ಸಚಿವ ಆನಂದ್ ಸಿಂಗ್ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯಾಚರಣೆ ಜಿಲ್ಲೆಯಾದ್ಯಂತ ಮುಂದುವರಿಸುವಂತೆ ಸೂಚಿಸಿದರು. ಹೊಸಪೇಟೆಯ ವಿವಿಧ ಬಡಾವಣೆ, ಸರ್ಕಲ್ ಗಳಲ್ಲಿ ಈಗಾಗಲೇ ಪೋಲಿಸ್ ಸಿಬ್ಬಂದಿ ಬಿಗಿಯಾಗಿ ಶಾಸಕರ ಆದೇಶವನ್ನು ಪಾಲಿಸುತ್ತಿದ್ದಾರೆ.
ಇದೆ ಸಂಧರ್ಭದಲ್ಲಿ ‘ಜಿಂದಾಲ್ ಸಂಸ್ಥೆ ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಬೇಕು ಮತ್ತು ತಮ್ಮ ತಮ್ಮ ಸಂಸ್ಥೆಯ ಕಾರ್ಮಿಕರು ಮತ್ತು ಉದ್ಯೋಗಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಪ್ರತಿ ಹಂತದಲ್ಲಿ ಸಾಮಾಜಿಕ ಅಂತರ ಪಾಲಿಸುವಂತೆ ತಿಳುವಳಿಕೆ ನೀಡಿ ಆಗಾಗ್ಗೆ ಸ್ಯಾನಿಟೈಸರ್ ಬಳಸಬೇಕು’ ಎಂದು ಜಿಂದಾಲ್ ಆಡಳಿತ ಮಂಡಳಿಗೆ ಮತ್ತು ಹಾಜರಿದ್ದ ಸರಗಕಾರಿ ಅಧಿಕಾರಿಗಳಿಗೆ ಆದೇಶಿಸಿದರು. ಅವರಿಗೆ ಸಚಿವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಹಾಜರಿದ್ದ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮಾತನಾಡಿ, ಜಿಲ್ಲೆಗೆ ರಾಜ್ಯ ಸರ್ಕಾರ ಪ್ರತಿನಿತ್ಯ 2,350 ಕೋವಿಡ್ ಟೆಸ್ಟ್ ಮಾಡಬೇಕೆನ್ನುವ ಗುರಿ ನಿಗದಿಪಡಿಸಿದೆ. ನಾವು ಪ್ರತಿನಿತ್ಯ 3500 ರಿಂದ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ 1128 ಆಕ್ಸಿಜನ್ ಸೌಲಭ್ಯವಿರುವ ಬೆಡ್‍ಗಳಿದ್ದು,ಅವುಗಳಲ್ಲಿ 115 ಜನರು ದಾಖಲಾಗಿದ್ದಾರೆ. 210 ಐಸಿಯೂ ಬೆಡ್‍ಗಳಿದ್ದು, 28 ಭರ್ತಿಯಾಗಿವೆ.118 ವೆಂಟಿಲೇಟರ್‌ಗಳಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲೆಯಲ್ಲಿ 1128 ಆಕ್ಸಿಜನ್ ಬೆಡ್‍ಗಳಿದ್ದು, ಅವುಗಳು ನಿರಂತರವಾಗಿ ನಡೆದರೂ 27 ಕೆಎಲ್ ಆಕ್ಸಿಜನ್ ಬೇಕಾಗಲಿದ್ದು, ಸಮರ್ಪಕ ಪ್ರಮಾಣದಲ್ಲಿ ನಮ್ಮಲ್ಲಿ ಆಕ್ಸಿಜನ್ ಲಭ್ಯವಿದೆ. ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post