ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಜಿಲ್ಲೆಯಲ್ಲಿ ಮೇ 7ರಂದು ಮಧ್ಯಾಹ್ನ 02 ರಿಂದ ಸಂಜೆ 05.20 ರವರೆಗೆ ನೀಟ್ NEET ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ನಗರದ ಸಿರುಗುಪ್ಪ ರಸ್ತೆಯ ಶ್ರೀ ಚೈತನ್ಯ ಟೆಕ್ನೋ ಶಾಲೆ, ಕಪ್ಪಗಲ್ ರಸ್ತೆಯ ಡ್ರೀಮ್ ವಲ್ರ್ಡ್ ಶಾಲೆ, ಸಂಜಯ್‍ಗಾಂಧಿ ನಗರದ ಸಂಜಯ್‍ಗಾಂಧಿ ಪಾಲಿಟೆಕ್ನಿಕ್ ಕಾಲೇಜ್, ಅಲ್ಲೀಪುರದ ಬಳ್ಳಾರಿ ಇನ್ಸ್ಟಿಟ್ಯೂಟ್ ಟೆಕ್ನಾಲಜಿ ಅಂಡ್ ಮ್ಯಾನೇಜ್‍ಮೆಂಟ್ ಕಾಲೇಜ್, ತಾಳೂರು ರಸ್ತೆಯ ಬಾಲಬಾರತಿ ಕೇಂದ್ರೀಯ ವಿದ್ಯಾಲಯ, ಹವಂಭಾವಿಯ ಹೊಸ ಶ್ರೀ ಚೈತನ್ಯ ಪಿಯು ಕಾಲೇಜ್, ಕೌಲ್‍ಬಜಾರ್ ಕೇಂದ್ರೀಯ ವಿದ್ಯಾಲಯ ಸೇರಿ ಒಟ್ಟು 07 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.
ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಆ ದಿನದಂದು ಮಧ್ಯಾಹ್ನ 01 ರಿಂದ ಸಂಜೆ 05.30 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post