ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಡಿ ಬರುವ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ಆ.16 ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
ದೇವಿಗೆ ಬಂಗಾರದ ಆಭರಣಗಳಿಂದ ಅಲಂಕಾರ ಮಾಡಲಾಗುವುದು. ಸಾರ್ವಜನಿಕರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















