ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಹಿನ್ನಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಅವರು, ಶನಿವಾರದಂದು ಬಳ್ಳಾರಿ ತಾಲ್ಲೂಕಿನ ಬಸರಕೋಡು ಮತ್ತು ಬಾಣಾಪುರ ಗ್ರಾಮಗಳ ಸಂತ್ರಸ್ತರ ಮನೆಗೆ ಭೇಟಿ ನೀಡಿದರು.
ಬಳ್ಳಾರಿ ತಾಲ್ಲೂಕಿನ ಬಸರಕೋಡು ಗ್ರಾಮದ ಕಮ್ಮಾರಿ ಲಲಿತಾ ಅವರ ಮನೆಗೆ ಭೇಟಿ ನೀಡಿ, ಪೋಷಕರ ಜೊತೆ ಮಾತನಾಡಿ ಸಾಂತ್ವನ ತುಂಬಿದರು. ಧೈರ್ಯದಿಂದ ಮಗುವನ್ನು ಆರೈಕೆ ಮಾಡಬೇಕು, ಸರ್ಕಾರದಿಂದ ಹೆಚ್ಚಿನ ನೆರವು ನೀಡಲಾಗುವುದು ಎಂದರು.
Also read: ತುಮಕೂರು | ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಇದಕ್ಕೂ ಮುನ್ನ ಬಾಣಾಪುರ ಗ್ರಾಮದ ಮೃತೆ ಹೂಗಾರ ನಂದಿನಿ ಅವರ ಮನೆಗೆ ಸಚಿವರು ಭೇಟಿ ನೀಡಿದರು.
ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ತಹಶೀಲ್ದಾರ ಗುರುರಾಜ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post