ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಈಶ್ವರಪ್ಪ #Eshwarappa ಅವರು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಹಿಂಪಡೆಯಲು ಇನ್ನೂ ಸಮಯ ಇದೆ, ಈಗಲೇ ತೀರ್ಮಾನ ಬೇಡ, ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು #Shriramulu ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ವೇಳೆ ಅವರು ಮಾತನಾಡಿದರು.
ಇನ್ನೂ, ಸಮಯ ಇದೆ. ಈಗಲೇ ಅಂತಿಮ ತೀರ್ಮಾನಕ್ಕೆ ಬರಬೇಡಿ. ಈಶ್ವರಪ್ಪ ಅವರು ನಾಮಪತ್ರ ಹಿಂಪಡೆಯಲು ಇನ್ನೂ ಸಮಯದ ಅವಕಾಶವಿದೆ ಎಂಬ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.
Also read: ರಣರಂಗಕ್ಕಿಳಿದ ಈಶ್ವರಪ್ಪ | ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ | ಬಿಸಿಲು ಲೆಕ್ಕಿಸದೇ ಸೇರಿದ್ದ ಜನ
ಇನ್ನು, ಶಿವಮೊಗ್ಗದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ಭರ್ಜರಿ ಮೆರವಣಿಗೆ ನಡೆಸಿದ ಕೆ.ಎಸ್. ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post