ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ಪ್ರಧಾನ ಹಕ್ಕಾಗಿದ್ದು, ದೇಶದ ಪ್ರಗತಿಗೆ ಎಲ್ಲರೂ ತಮ್ಮ ಅಮೂಲ್ಯ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ “ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಹೆಮ್ಮೆಯಿಂದ” ಎಂಬ ಘೋಷ ವಾಕ್ಯದೊಂದಿಗೆ ಬುಧವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

Also read: ಚುನಾವಣಾ ಪ್ರಚಾರದ ವೇಳೆ ಬಳಸುವ ಅನುಚಿತ ಭಾಷೆ ಮೇಲೆ ಎಚ್ಚರವಿರಲಿ: ಡಿಸಿ ಪವನ್‍ಕುಮಾರ್ ಮಾಲಪಾಟಿ
ಮತದಾನ ಜಾಗೃತಿ ಅಭಿಯಾನದಲ್ಲಿ ಮತದಾನ ಕುರಿತು ಮಾಹಿತಿಯಿರುವ ಫಲಕಗಳನ್ನು ಹಿಡಿದುಕೊಂಡು ಮಹಿಳೆಯರು ಜಾಥಾದಲ್ಲಿ ಸಾಗಿದರು. ಮತದಾನ ಜಾಗೃತಿ ಅಭಿಯಾನ ಜಾಥಾವು ಜಿಲ್ಲಾ ನ್ಯಾಯಾಲಯ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದವರೆಗೆ ಸಾಗಿ ಬಂದಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post