ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ #Tuberculosis free ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಂಡೂರು ಶಾಸಕರಾದ ಈ. ಅನ್ನಪೂರ್ಣ ಅವರು ಹೇಳಿದರು.
‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ‘ಹೌದು! ನಾವು ಕ್ಷಯವನ್ನು ಕೊನೆಗೊಳಿಸಬಹುದು’ ಎಂಬ ಧ್ಯೇಯವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ವತಿಯಿಂದ ನಗರದ ಬಿಮ್ಸ್ ನ ವೈದ್ಯ ಭವನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 2024 ನೇ ಸಾಲಿಗೆ ಎಸ್‌ಟಿಇಪಿ ಕಾರ್ಯಕ್ರಮದಡಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಜನತೆಯು ಕ್ಷಯರೋಗದ ಕುರಿತು ಹೆಚ್ಚು ಕಾಳಜಿ ತೆಗೆದುಕೊಳ್ಳದೇ ಇರುವುದು ಕಂಡುಬರುತ್ತಿದ್ದು, ಈ ದಿಶೆಯಲ್ಲಿ ಸೂಕ್ತ ಜಾಗೃತಿ ನೀಡಬೇಕು. ಜೊತೆಗೆ ಕ್ಷಯರೋಗವನ್ನು ಸಕಾಲದಲ್ಲಿ ಗುರುತಿಸುವ ಕಾರ್ಯದಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಆಶಾಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಕ್ಷಯಮುಕ್ತ ಬಳ್ಳಾರಿಯನ್ನಾಗಿ ಮಾಡುವ ಪ್ರಯತ್ನವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಕರೆ ನೀಡಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಕ್ಷಯರೋಗವು ಹಿಂದಿನ ಕಾಲದಲ್ಲಿ ಸಾಕಷ್ಟು ಪರಿಣಾಮ ಬೀರಿತ್ತು. ಪ್ರಸ್ತುತದಲ್ಲಿ ಆಧುನಿಕ ತಂತ್ರಜ್ಞಾನವುಳ್ಳ ಯಂತ್ರಗಳು ಲಭ್ಯವಿದ್ದು, ಸಕಾಲದಲ್ಲಿ ಗುರುತಿಸಿ ತ್ವರಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.
Also read: 38 ಕಾಲೇಜು, 800ಕ್ಕೂ ಹೆಚ್ಚು ವಿದ್ಯಾರ್ಥಿಗಳು | JNNE ಕಾಲೇಜಿನಲ್ಲಿ ಮನಸೂರೆಗೊಂಡ ಉತ್ಥಾನ-2025
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕ್ಷಯ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿವೆ. ಸಂಪೂರ್ಣವಾಗಿ ಕಡಿಮೆ ಮಾಡಲು ಸಾರ್ವಜನಿಕರು ಆರೋಗ್ಯ ಇಲಾಖೆಗೆ ಕೈಜೋಡಿಸಬೇಕು ಎಂದು ಹೇಳಿದರು.
ಕ್ಷಯ ಲಕ್ಷಣ ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು. ಬಳಿಕ ಶೀಘ್ರವಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2024 ಸಾಲಿಗೆ ಕ್ಷಯಮುಕ್ತ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಆ ವ್ಯಾಪ್ತಿಯ ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಬಳ್ಳಾರಿ ತಾಲ್ಲೂಕಿನ ಭೈರದೇವನಹಳ್ಳಿ, ರ‍್ರಗುಡಿ, ಸಂಗನಕಲ್ಲು, ಸಿರಿವಾರ ಮತ್ತು ಕರ‍್ಲಗುಂದಿ.
ಬಳಿಕ ಉತ್ತಮ ಸೇವೆ ಸಲ್ಲಿಸಿದ ವೈದ್ಯರು, ಕ್ಷೇತ್ರ ಸಿಬ್ಬಂದಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಂಘ ಸಂಸ್ಥೆಗಳಿಗೆ ಸನ್ಮಾನಿಸಲಾಯಿತು.
ಗಮನಸೆಳೆದ ಜಾಗೃತಿ ಜಾಥಾ
ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಜಾಥಾವು ಗಮನ ಸೆಳೆಯಿತು. ವಿವಿಧ ಸಾಂಸ್ಕೃತಿ ಕಲಾತಂಡಗಳನ್ನೊಳಗೊಂಡ ಜಾಥಾದಲ್ಲಿ ಆಶಾ-ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿ ಘೋಷಣೆ ಕೂಗುವ ಮೂಲಕ ಜಾಗೃತಿ ಮೂಡಿಸಲಾಯಿತು. ಕ್ಷಯರೋಗ ಜಾಗೃತಿ ಮೂಡಿಸುವ ಮಾಹಿತಿ ಫಲಕಗಳು ರಾರಾಜಿಸಿದವು.
ಜಾಗೃತಿ ಜಾಥಾವು ನಗರದ ಕನಕದಾಸರ ವೃತ್ತದ ಕೆಎಂಎಫ್ ಮುಂಭಾಗದಿAದ ಆರಂಭಗೊಂಡು ಇನ್ ಫ್ಯಾಂಟರಿ ರಸ್ತೆಯ ಮೂಲಕ ಬಳ್ಳಾರಿ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ದ ವೈದೈ ಭವನದ ಸಭಾಂಗಣದವರೆಗೆ ಸಾಗಿ ಸಮಾರೋಪಗೊಂಡಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್ ಸೇರಿದಂತೆ ವಿವಿಧ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಟಿಬಿ ವಿಭಾಗದ ಸಿಬ್ಬಂದಿ, ಟಿಬಿ ಚಾಂಪಿಯನ್ಸ್ ಹಾಗೂ ಬಿಮ್ಸ್ ನ ತರಬೇತುದಾರ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post