ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್‌ಗಳನ್ನು #Domestic Gas Cylinder ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕ ಸಕೀನಾ ಅವರು ತಿಳಿಸಿದ್ದಾರೆ.
Also read: ಮಹಾಕುಂಭದಲ್ಲಿ ಕಾಲ್ತುಳಿತ | 10 ಭಕ್ತರ ಸಾವು | ಈಗ ಹೇಗಿದೆ ಪರಿಸ್ಥಿತಿ?
5 ಕಿ.ಮೀ ನಂತರದ ಪ್ರತಿ ಕಿ.ಮೀ ರೌಂಡ್ ಟ್ರಿಪ್ ಗೆ ಪ್ರತಿ ಸಿಲಿಂಡರ್ಗೆ ರೂ.1.60 ತೆಗೆದುಕೊಳ್ಳಬೇಕು. ತಪ್ಪಿದ್ದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post