No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅಗತ್ಯ ವ್ಯವಸ್ಥೆ: ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ

kalpa News by kalpa News
August 28, 2023
in Army, ಬಳ್ಳಾರಿ
0
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಭದ್ರಾವತಿಯಲ್ಲಿ ಎಷ್ಟು ಕೇಂದ್ರಗಳಿವೆ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯು Gruhalakshmi Scheme ಆ.30 ರಂದು ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮಹಾನಗರಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ನ ವಾರ್ಡ್ ಮಟ್ಟದಲ್ಲಿ ಹಾಗೂ ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್.ಇ.ಡಿ ಅಥವಾ ಪ್ರೊಜೆಕ್ಟರ್ ಪರದೆಯ ಮೂಲಕ ಮಹಿಳೆಯರು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು. ಮನೆಯ ಮುಂದೆ ರಂಗೋಲಿಯಲ್ಲಿ ‘ನಾನು ಗೃಹಲಕ್ಷ್ಮೀ, ಮನೆಯ ಯಜಮಾನಿ’ ಎಂದು ಬರೆಯುವಂತೆ ಮನವಿ ಮಾಡಿದ ಸಚಿವರು, ಒಟ್ಟಾರೆಯಾಗಿ ಗ್ರಾಮಗಳಲ್ಲಿ ಹಬ್ಬದ ವಾತವರಣ ಮೂಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯು ಪ್ರಾರಂಭದಿಂದ (20-07-23) ಇಲ್ಲಿಯವರೆಗೆ (27-08-2023) 3,01,180 ಫಲಾನುಭವಿಗಳ ಪೈಕಿ 2,59,161 (ಶೇ.86.05) ಫಲಾನುಭವಿಗಳು ನೊಂದಾಯಿಸಿಕೊಂಡಿದ್ದು, 42,019 ಅರ್ಜಿ ಸಲ್ಲಿಸಲು ಬಾಕಿಯಿರುತ್ತದೆ. ಈ ಪೈಕಿ ನೊಂದಣಿಯಲ್ಲಿ ಜಿಲ್ಲೆಯು ಐದನೇ ಸ್ಥಾನದಲ್ಲಿದೆ. ಕೂಡಲೇ ಅರ್ಹರು ಹತ್ತಿರದ ಗ್ರಾಮ ಒನ್,ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ತಾಲೂಕುವಾರು ಅಂಕಿ-ಅಂಶ:
ಫಲಾನುಭವಿಗಳ ಗುರಿ: ಬಳ್ಳಾರಿ ನಗರ-77,945., ಬಳ್ಳಾರಿ ಗ್ರಾಮೀಣ-50,488., ಕುರುಗೋಡು-26,495., ಕಂಪ್ಲಿ-30,050., ಸಿರುಗುಪ್ಪ-64,350., ಸಂಡೂರು-51,852., ಒಟ್ಟು 3,01,180.

ನೊಂದಣಿಯಾದ ಫಲಾನುಭವಿಗಳ ಸಂಖ್ಯೆ: ಬಳ್ಳಾರಿ ನಗರ-69,089 (ಶೇ.88.64), ಬಳ್ಳಾರಿ ಗ್ರಾಮೀಣ-42,406(ಶೇ.83.99), ಕುರುಗೋಡು-24,926 (ಶೇ.94.08), ಕಂಪ್ಲಿ-24,137(ಶೇ.80.32), ಸಿರುಗುಪ್ಪ-55,372(ಶೇ.86.05), ಸಂಡೂರು-43,231(ಶೇ. 83.37), ಒಟ್ಟು 2,59,161 (ಶೇ. 86.05).
101 ಕಡೆ ನೇರ ಪ್ರಸಾರ ವ್ಯವಸ್ಥೆ:
ಆ.30 ರಂದು ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆ ಸಮಾರಂಭದ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸಲು ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಗ್ರಾಮ ಪಂಚಾಯತ್ ಮಟ್ಟ ಸೇರಿದಂತೆ 101 ಕಡೆ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ ನಗರದಲ್ಲಿ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನ, ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನ ಹಾಗೂ ಬಳ್ಳಾರಿ ಗ್ರಾಮಾಂತರದಲ್ಲಿ ಕುಡುತಿನಿ ಪಟ್ಟಣ ಪಂಚಾಯತ್ ಹಾಗೂ ಇದರ ವ್ಯಾಪ್ತಿಗೆ ಬರುವ 25 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಡೂರು ತಾಲೂಕಿನ ಆದರ್ಶ ಕಲ್ಯಾಣ ಮಂಟಪ ಹಾಗೂ ಕುರೇಕುಪ್ಪ ಪುರಸಭೆಯ ಶ್ರೀ ಆಂಜನೇಯ ದೇವಸ್ಥಾನ ಮತ್ತು 26 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸಿರುಗುಪ್ಪ ತಾಲೂಕಿನ ಬಾಲಾಜಿ ಚಿತ್ರಮಂದಿರ, ಕಾಡಾಸಿದ್ದೇಶ್ವರ ದೇವಸ್ಥಾನ ಹಾಗೂ ತೆಕ್ಕಲಕೋಟೆಯ 3ನೇ ವಾರ್ಡ್ ಪಕ್ಕಿರ ಮಸೀದಿ ಹತ್ತಿರ ಮತ್ತು 27 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ, ಕುರುಗೋಡು ತಾಲೂಕಿನ ಎಸ್.ವಿ.ಕಲ್ಯಾಣ ಮಂಟಪ ಹಾಗೂ 12 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ, ಕಂಪ್ಲಿ ತಾಲೂಕಿನ ಪುರಸಭೆ ಭವನ ಹಾಗೂ 20ನೇ ವಾರ್ಡ್ ಮಾರುತಿನಗರ ಮತ್ತು 11 ಪಂಚಾಯತ್ ಕೇಂದ್ರ ಸ್ಥಾನಗಳಲ್ಲಿ ವೀಕ್ಷಣೆ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಸ್ಥಳೀಯ ಕಾರ್ಯಕ್ರಮದಲ್ಲಿ ಕನಿಷ್ಟ 2000 ಫಲಾನುಭವಿಗಳು ಭಾಗವಹಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಕಾರ್ಯಕ್ರಮದ ಸ್ಥಳದಲ್ಲಿ ಒಂದು ಎಲ್.ಇ.ಡಿ ಟಿ.ವಿ ಅಥವಾ ಒಂದು 10*10 ಅಳತೆಯ ಎಲ್.ಇ.ಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಟಿ.ವಿ.ಯಲ್ಲಿ ಮೈಸೂರು ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರವನ್ನು ಪ್ರದರ್ಶಿಸಲಾಗುವುದು. ಹಾಗೂ ಎಲ್.ಇ.ಡಿ ಪರದೆಯಲ್ಲಿ ಮೈಸೂರು ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮ ನಡೆಸುವ ಸ್ಥಳಗಳಲ್ಲಿ ಪೂರ್ವಭಾವಿಯಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸ್ಥಳ/ಕಟ್ಟಡ (ಸಮುದಾಯ ಭವನ, ಶಾಲೆ, ಕಲ್ಯಾಣ ಮಂಟಪ ಇತ್ಯಾದಿ), ಟಿ.ವಿ ವ್ಯವಸ್ಥೆ, ಎಲ್.ಇ.ಡಿ/ ಪ್ರೊಜೆಕ್ಟರ್ ವ್ಯವಸ್ಥೆ, ಮೈಕ್ ವ್ಯವಸ್ಥೆ, ಹಾಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಬ್ಯಾನರ್, ಲ್ಯಾಪ್ ಟ್ಯಾಪ್ ಅಂತರ್ಜಾಲ ವ್ಯವಸ್ಥೆ (ಇಂಟರ್ ನೆಟ್), ಛಾಯ ಗ್ರಹಣ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಟೀ-ಬಿಸ್ಕೆಟ್ ಹಾಗೂ ಉಪಹಾರ ವ್ಯವಸ್ಥೆ, ವಿದ್ಯುತ್‍ಚ್ಛಕ್ತಿ ವ್ಯವಸ್ಥೆ (ಯು.ಪಿ.ಎಸ್/ಜನರೇಟರ್), ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಕ್ಕರ್’ನಿಂದ ಹೊಡೆದು ಪ್ರಿಯತಮೆಯನ್ನು ಕೊಂದ ಪಾಪಿ

Next Post

ಇತಿಹಾಸದ ಅಧ್ಯಯನದಿಂದ ಸದೃಢ ಭವಿಷ್ಯ ನಿರ್ಮಾಣ ಸಾಧ್ಯ: ಸಚಿವ ಶಿವರಾಜ ತಂಗಡಗಿ

kalpa News

kalpa News

Next Post
ಇತಿಹಾಸದ ಅಧ್ಯಯನದಿಂದ ಸದೃಢ ಭವಿಷ್ಯ ನಿರ್ಮಾಣ ಸಾಧ್ಯ: ಸಚಿವ ಶಿವರಾಜ ತಂಗಡಗಿ

ಇತಿಹಾಸದ ಅಧ್ಯಯನದಿಂದ ಸದೃಢ ಭವಿಷ್ಯ ನಿರ್ಮಾಣ ಸಾಧ್ಯ: ಸಚಿವ ಶಿವರಾಜ ತಂಗಡಗಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL