ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಗುಗ್ಗರಹಟ್ಟಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ 2022-23 ರ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ.98 ರಷ್ಟು ಫಲಿತಾಂಶ Second PU Result ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರವಿ.ಯು.ಎಂ ಅವರು ತಿಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ರಜಿಯಾ ಅವರು 537 ಅಂಕ ಮತ್ತು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ 556 ಅಂಕಗಳನ್ನು ಪಡೆದುಕೊಂಡಿದ್ದು, ಕಾಲೇಜಿಗೆ ಪ್ರಥಮರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ.96 ಮತ್ತು ವಿಜ್ಞಾನ ವಿಭಾಗದಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದೆ.
ಕಾಲೇಜಿನ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ಒಂದು ವಿದ್ಯಾರ್ಥಿಯು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ನಿಲಯಪಾಲಕರು ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post