ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಜ.2 ರಿಂದ 08 ರ ವರೆಗೆ ಬೆಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಗೃಹರಕ್ಷಕರ ಕ್ರೀಡಾಪಟುಗಳಿಗೆ ಚಾಂಪಿಯನ್‍ಶಿಪ್ ಕಪ್ ಲಭಿಸಿದೆ ಎಂದು ಜಿಲ್ಲಾ ಸಮಾದೇಷ್ಟರಾದ ಬಸವರಾಜ ಅಗಸರ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಮುಂಡ್ಕೂರ್ ತರಬೇತಿ ಅಕಾಡೆಮಿ ಮೈದಾನದಲ್ಲಿ ಜ.08 ರಂದು ನಡೆದ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವರಾದ ಪರಮೇಶ್ವರ ಅವರು ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಅಲೋಕ್ ಮೋಹನ್ ಅವರು ಕಪ್ ವಿತರಣೆ ಮಾಡಿದ್ದಾರೆ.

Also read: ಶಿವಮೊಗ್ಗ: ರಸ್ತೆಯಲ್ಲಿ ಬೈಕ್ ವೀಲಿಂಗ್ ಕೋರ್ಟ್ ನಿಂದ ಬಿತ್ತು ಭಾರಿ ಮೊತ್ತದ ದಂಡ
ಬಳ್ಳಾರಿ ತಂಡವು ಪುರುಷರ ವಿಭಾಗದಲ್ಲಿ ಈಶಾನ್ಯ ವಲಯದ ವೃತ್ತಿಪರ ಕ್ರೀಡೆಗಳಾದ ರೈಫಲ್ ಡ್ರಿಲ್, ರಕ್ಷಣೆ ಮತ್ತು ಆಗ್ನಿ ಶಮನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಮತ್ತು ಮಹಿಳಾ ವಿಭಾಗದಲ್ಲಿ ಪ್ರಥಮ ಚಿಕಿತ್ಸೆಯಲ್ಲಿ ಪ್ರಥಮ ಸ್ಥಾನ ಮತ್ತು ರೈಫಲ್ ಡ್ರಿಲ್‍ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವೃತ್ತಿಪರ ಕ್ರೀಡೆ ಮತ್ತು ಎಲ್ಲಾ ತರಹದ ಕ್ರೀಡೆಗಳಲ್ಲಿ ಈಶಾನ್ಯ ವಲಯ ಮಟ್ಟದ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳು “ಚಾಂಪಿಯನ್‍ಶಿಪ್ ಕಪ್” ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post