Tuesday, May 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬಳ್ಳಾರಿಯಲ್ಲಿ ಎಷ್ಟು ಮತದಾರರಿದ್ದಾರೆ? ಅಕ್ರಮ ತಡೆಯಲು ಎಷ್ಟು ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ? ಇಲ್ಲಿದೆ ಮಾಹಿತಿ

March 30, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಚುನಾವಣಾ ಆಯೋಗವು 2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಿದ್ದು, ಏಪ್ರಿಲ್ 13ರಿಂದ ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾಮಪತ್ರ ಸಲ್ಲಿಸಲು ಏ.13 ರಿಂದ ಆರಂಭವಾಗಿ ಏ.20 ಕೊನೆಯ ದಿನವಾಗಿರುತ್ತದೆ. ಏ.21 ರಂದು ನಾಮಪತ್ರಗಳ ಪರಿಶೀಲನೆ ಮತ್ತು ಏ.24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ.10 ರಂದು ಮತದಾನ, ಮೇ.13 ಎಣಿಕೆ ನಡೆಯಲಿದ್ದು, ನೀತಿ ಸಂಹಿತೆಯು ಮೆ.15ರವೆಗೆ ಜಾರಿಯಲ್ಲಿರುತ್ತದೆ.
ಚುನಾವಣಾಧಿಕಾರಿಗಳ ನೇಮಕ:
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿದೆ. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಸಂಡೂರುಗೆ ಜಿಪಂನ ಉಪಕಾರ್ಯದರ್ಶಿ ಶರಣಬಸವರಾಜ, ಸಿರುಗುಪ್ಪಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್ ಹಾಗೂ ಕಂಪ್ಲಿಗೆ ವಿಮ್ಸ್‍ನ ಮುಖ್ಯಾಧಿಕಾರಿ ಡಾ.ನಯನ ಅವರನ್ನು ನೇಮಕ ಮಾಡಲಾಗಿದೆ.

ಕ್ಷೇತ್ರ ಮತ್ತು ಮತದಾರರು:
ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಮತಕ್ಷೇತ್ರಗಳಿದ್ದು, ಅದರಲ್ಲಿ 4 (91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ ಹಾಗೂ 95-ಸಂಡೂರು) ಪರಿಶಿಷ್ಟ ಪಂಗಡ ಮೀಸಲು ಮತಕ್ಷೇತ್ರಗಳಿದ್ದು, 94-ಬಳ್ಳಾರಿ ನಗರ ಕ್ಷೇತ್ರವು ಇತರೆ ಮೀಸಲು ಕ್ಷೇತ್ರವಾಗಿದೆ. ಜಿಲ್ಲೆಯಲ್ಲಿ 5,61,718 ಪುರುಷ ಮತದಾರರು, 5,79,012 ಮಹಿಳಾ ಮತದಾರರು, 169 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿದಂತೆ ಒಟ್ಟು 11,40,899 ಮತದಾರರು ಇದ್ದಾರೆ. ಜಿಲ್ಲೆಯ ಒಟ್ಟು ಚುನಾವಣಾ ಜನಸಂಖ್ಯೆ ಸರಾಸರಿಗೆ ಶೇ.63.46ರಷ್ಟು ಮತದಾರರು ಇದ್ದಾರೆ. ಇದು ಈ ಹಿಂದಿನ ಚುನಾವಣೆಗೆ ಹೋಲಿಸಿದರೆ ಹೆಚ್ಚಳವಾಗಿದೆ ಎಂದು ತಿಳಿಸಿದರು.

ಈಗಾಗಲೇ ಮತದಾರರ ನೋಂದಣಿ ಪ್ರಕ್ರಿಯೆಯು ಜಾರಿಯಲ್ಲಿದ್ದು, ಹೊಸದಾಗಿ ನೊಂದಾಯಿಸಬೇಕಾದ ಮತದಾರರಿಗೆ ಎಪ್ರೀಲ್ 11 ರವರೆಗೆ ನೋಂದಣಿಗಾಗಿ ಅರ್ಜಿಯನ್ನು ಸ್ವೀಕರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ. ಅರ್ಹರಿರುವರು ನಿಗದಿಪಡಿಸಿದ ಕಾಲ ಮಿತಿಯೊಳಗೆ ಅಂತರ್ಜಾಲದಲ್ಲಿ ತಮ್ಮ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸಾರ್ವಜನಿಕರು ಪಾತ್ರವಹಿಸಬೇಕು ಎಂದು ಹೇಳಿದರು.
ಯುವ ಮತದಾರರಲ್ಲಿ ಪ್ರಥಮ ಜಿಲ್ಲೆ:
ಜಿಲ್ಲೆಯಲ್ಲಿ ಈ ಬಾರಿ 34,265 ಯುವ ಮತದಾರರು ನೊಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿಯೇ ಬಳ್ಳಾರಿ ಜಿಲ್ಲೆಯು ಅತಿಹೆಚ್ಚು ಯುವ ಮತದಾರರನ್ನು ನೋಂದಾಯಿಸಿದ ಪ್ರಥಮ ಜಿಲ್ಲೆಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1191 ಚುನಾವಣಾ ಮತಗಟ್ಟೆಗಳಿವೆ. ಚುನಾವಣಾ ಆಯೋಗವು ಸಹ ಹೊಸ ಮತಯಂತ್ರಗಳ ಬಳಕೆಗೆ ಸಜ್ಜಾಗಿದೆ. ಹೈದರಾಬಾದ್ ಮೂಲದ ಇಸಿಐಎಲ್ (ಎಲೆಕ್ಟ್ರಾನಿಕ್ ಕಾಪೆರ್Çೀರೇಷನ್ ಇಂಡಿಯಾ ಲಿಮಿಟೆಡ್) ಹೊಸ ಮತ ಯಂತ್ರಗಳನ್ನು ತಯಾರಿಸಿದೆ. ಜಿಲ್ಲೆಯ ಮತಗಟ್ಟೆಗಳಿಗೆ ಅವಶ್ಯವಿರುವ 2445 (ಬ್ಯಾಲೆಟ್ ಯುನಿಟ್), 1716 (ಕಂಟ್ರೋಲ್ ಯುನಿಟ್) ಮತ್ತು 1857 (ವಿ.ವಿ.ಪ್ಯಾಟ್)ಗಳು ಸರಬರಾಜು ಆಗಿದ್ದು, ಇ.ವಿ.ಎಂ.ಗಳನ್ನು ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟ ತಂತ್ರಜ್ಞರಿಂದ ರಾಜಕೀಯ ಪಕ್ಷಗಳ ಉಪಸ್ಥಿತಿಯಲ್ಲಿ ಪ್ರಥಮ ಹಂತದ ಪರಿಶೀಲನಾ ಕಾರ್ಯವನ್ನು ಮಾಡಲಾಗಿದೆ. ಈ ನೂತನ ಮತ ಯಂತ್ರಗಳಲ್ಲಿ ಮತದಾರರು ಮತ ಚಲಾಯಿಸಿದಾಗ ಅಭ್ಯರ್ಥಿಯ ಛಾಯಾಚಿತ್ರ ಗೋಚರಿಸಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 16,827 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು ಮತ್ತು 14, 871 ಜನ ವಿಶೇಷ ಚೇತನ ಮತದಾರರಿದ್ದಾರೆ. ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ವಿಶೇಷ ಚೇತನರು ಮತದಾನದಿಂದ ಹೊರಗುಳಿಯಬಾರದೆಂದು ಮನೆಯಿಂದಲೇ ಮತದಾನ ಮಾಡಲು ಅಂಚೆ ಮತದಾನವನ್ನು ಇದೇ ಮೊದಲ ಬಾರಿ ಪರಿಚಯಿಸಿದೆ. ಈ ಮೂಲಕ ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿದ ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟ ವಯಸ್ಕರು ಅಗತ್ಯ ದಾಖಲೆ ನೀಡಿ ಧೃಢೀಕರಣದೊಂದಿಗೆ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 5 ಮತಕ್ಷೇತ್ರಗಳಿಗೆ ಜಿಲ್ಲೆಯಾದ್ಯಂತ ಒಟ್ಟು 24 ಚೆಕ್‍ಪೆÇೀಸ್ಟ್ ಸ್ಥಾಪಿಸಲಾಗಿರುತ್ತದೆ. ಪ್ರತಿ ಚೆಕ್‍ಪೆÇೀಸ್ಟ್‍ನಲ್ಲಿ 3 ಎಸ್‍ಎಸ್‍ಟಿ ಅಧಿಕಾರಿಗಳು ಹಾಗೂ ಪೆÇಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವ್ಯಾಡ್ ಮತ್ತು ವಿಡಿಯೋ ಕಣ್ಗಾವಲು ತಂಡಗಳನ್ನೂ ಕೂಡ ನೇಮಕ ಮಾಡಲಾಗಿದೆ.
ಸಿ.ವಿಸಲ್ ಆಪ್ ಬಳಸಿ:
ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಜರುಗುವಲ್ಲಿ ಪ್ರತಿಯೊಬ್ಬ ನಾಗರಿಕರು ಸಿ.ವಿಸಲ್ ಆಪ್ ಬಳಸಿ ನೀತಿ ಸಂಹಿತೆ ಉಲ್ಲಂಘಿಸುವ ಪ್ರಕರಣಗಳನ್ನು ಇದರಲ್ಲಿ ದಾಖಲಿಸಬಹುದಾಗಿದೆ. ಪ್ರತಿಯೊಬ್ಬರೂ ಯಾವುದೇ ಆತಂಕವಿಲ್ಲದೇ ಈ ಆಪ್ ಬಳಕೆ ಮಾಡಿಕೊಂಡು ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದ ಅವರು ಎಲ್ಲಾ ರಾಜಕೀಯ ಪಕ್ಷದವರು ಹಾಗೂ ಅಧಿಕಾರಿ ವರ್ಗದವರು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕಾನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Previous Post

ಯಕ್ಷಗಾನ, ಕೋಲ, ನೇಮಕ್ಕೆ ನೀತಿ ಸಂಹಿತೆ ನಿರ್ಬಂಧವಿದೆಯೇ? ದಕ್ಷಿಣ ಕನ್ನಡ ಡಿಸಿ ಹೇಳಿದ್ದೇನು?

Next Post

ಜಿಲ್ಲಾಧಿಕಾರಿ ಹೈಅಲರ್ಟ್: ತಡರಾತ್ರಿವರೆಗೂ ಚುನಾವಣಾ ಚೆಕ್ ಪೋಸ್ಟ್ ಪರಿಶೀಲಿಸಿದ ಡಿಸಿ ಸೆಲ್ವಮಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲಾಧಿಕಾರಿ ಹೈಅಲರ್ಟ್: ತಡರಾತ್ರಿವರೆಗೂ ಚುನಾವಣಾ ಚೆಕ್ ಪೋಸ್ಟ್ ಪರಿಶೀಲಿಸಿದ ಡಿಸಿ ಸೆಲ್ವಮಣಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025

ಶಿವಮೊಗ್ಗದಲ್ಲಿರುವ ದೇಶದ್ರೋಹಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಿ: ಶಾಸಕ ಚನ್ನಬಸಪ್ಪ

May 12, 2025

ಮೇ 13-16ರವರೆಗೆ ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

May 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025

ಶಿವಮೊಗ್ಗದಲ್ಲಿರುವ ದೇಶದ್ರೋಹಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಿ: ಶಾಸಕ ಚನ್ನಬಸಪ್ಪ

May 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!