ಕಲ್ಪ ಮೀಡಿಯಾ ಹೌಸ್
ಬಳ್ಳಾರಿ: ಪತ್ರಕರ್ತರಿಗೆ ನಿವೇಶನ ಅಷ್ಟೇ ಅಲ್ಲ, ಇದರ ಜೊತೆಗೆ ಸ್ಲಂ ಬೊರ್ಡ್, ಹೌಸಿಂಗ್ ಬೋರ್ಡ್ ಅಡಿ ಎಲ್ಲರಿಗೂ ಮನೆ ಮಂಜೂರು ಮಾಡಿಸುವೆ, ಇದು ಭರವಸೆ ಅಲ್ಲ, ನುಡಿದಂತೆ ನಡೆಯುವೆ ಎಂದು ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬೂಡಾ ಅಧ್ಯಕ್ಷ ದಮ್ಮೂರ್ ಶೇಖರ್ ಹಾಗೂ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.

ಕಾ.ನಿ.ಪ.ಸಂಘದ ರಾಜ್ಯ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ ಅವರು ಮಾತನಾಡಿ, ಬೂಡಾ ಅಧ್ಯಕ್ಷ ದಮ್ಮೂರ್ ಶೇಖರ್ ಹಾಗೂ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರ ಶ್ರಮದಿಂದ ನಮ್ಮ ಎಲ್ಲ ಪತ್ರಕರ್ತರಿಗೆ ನಿವೇಶನ ಹಂಚಿಕೆಯಲ್ಲಿ ಶೇ.5ರಷ್ಟು ಮೀಸಲಾತಿ ಸೌಲಭ್ಯ ದೊರೆತಿದೆ. ಇದು ನಮ್ಮ ಜಿಲ್ಲೆ ಅಷ್ಟೇ ರಾಜ್ಯದ ಎಲ್ಲ ಪತ್ರಕರ್ತರಿಗೆ ಇದು ಅನ್ವಯವಾಗಲಿದೆ, ಇದು ನಮಗೆ ಹೆಮ್ಮೆ ಎಂದರು. ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಪತ್ರಕರ್ತರಿದ್ದು, ಎಲ್ಲರಿಗೂ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವಂತಾಗಬೇಕು, ಆಗದಿದ್ದರೆ ಸರ್ಕಾರದ ಗಮನಸೆಳೆದು ಎಲ್ಲರಿಗೂ ಸೌಲಭ್ಯಗಳನ್ನು ಕಲ್ಪಿಸಲು ಹೋರಾಟ ಮುಂದುವರೆಸುವೆ ಎಂದರು.

ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ದಮ್ಮೂರ್ ಶೇಖರ್ ಅವರು ಮಾತಮಾಡಿದರು. ಕಾ.ನಿ.ಪ.ಸಂಘದ ಜಿಲ್ಲಾಧ್ಯಕ್ಷ ಜಗನ್ ಮೋಹನ್ ರೆಡ್ಡಿ, ಯುವ ಮುಖಂಡ ಶ್ರೀನಿವಾಸ್ ಮೋತ್ಕರ್, ಹಿರಿಯ ಛಾಯಾಗ್ರಾಹಕ ಲೋಕನಾಥ್ ಸೇರಿದಂತೆ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post