ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಸಾರಿಗೆ ಇಲಾಖೆ ವತಿಯಿಂದ 4ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಕಲ್ಯಾಣ ಕೇಂದ್ರವು ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಕಲ್ಯಾಣ ಮಂಟಪವಾಗಲಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು Minister Shriramulu ಅವರು ಹೇಳಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ಕಚೇರಿ ಹಿಂಭಾಗದ 2ನೇ ಹಳೇ ಬಸ್ ಘಟಕದಲ್ಲಿ ನೂತನ ಕಾರ್ಮಿಕ ಕಲ್ಯಾಣ ಕೇಂದ್ರದ ನಿರ್ಮಾಣಕ್ಕೆ ಶಂಕುಸ್ಥಾಪನಾ ಅಡಿಗಲ್ಲು ಹಾಗೂ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

Also read: ಜನವರಿ 7 ರಿಂದ 9ರವರೆಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ: ಡಿಸಿ
ಕಾರ್ಮಿಕ ಕಲ್ಯಾಣ ಕೇಂದ್ರದ ವಿಶೇಷತೆ:
ಸುಮಾರು 1 ಎಕರೆ ಪ್ರದೇಶದಲ್ಲಿ ರೂ.4 ಕೋಟಿ ವೆಚ್ಚದಲ್ಲಿ ಕಾರ್ಮಿಕ ಕಲ್ಯಾಣ ಕೇಂದ್ರವು ನಿರ್ಮಾಣವಾಗಲಿದೆ. ನೆಲಮಹಡಿ 1306 ಚ.ಮೀ, ಮೊದಲ ಮಹಡಿ 1246 ಚ.ಮೀ ಸೇರಿದಂತೆ ಒಟ್ಟು ವಿಸ್ತೀರ್ಣ 2553 ಚ.ಮೀ ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿದೆ.

ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿದ ಚಾಲನಾ ಸಿಬ್ಬಂದಿಗಳಿಗೆ ಹಾಗೂ ನಿಗಮದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.












Discussion about this post