ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ವಿಧಾನಸಭೆ ಸಾರ್ವತ್ರಿಕ ಚುನಾವಣೆ Karnataka Assembly Election ಸಂಬಂಧಿಸಿದಂತೆ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಪುರ ಬೈಪಾಸ್ ರಸ್ತೆ ವೃತ್ತದಲ್ಲಿ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ನಲ್ಲಿ ಎಸ್‍ಎಸ್‍ಟಿ ತಂಡಕ್ಕೆ ನಿಯೋಜನೆಗೊಂಡಿದ್ದ ಎಪಿಎಂಸಿಯ ಬೆರಳಚ್ಚುಗಾರ ಎಸ್.ವಿಶ್ವನಾಥ ಗೌಡ ಅವರು ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ DC Pawankumar Malapati ಆದೇಶ ಮಾಡಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ಸಂಬಂಧಿಸಿದಂತೆ, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆಯನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವುದು ಅವಶ್ಯವಿರುವುದರಿಂದ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳನ್ನು ರಚಿಸಿಲಾಗಿದೆ.

ನೌಕರರಿಗೆ ಚುನಾವಣೆ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುವಂತೆ ವೀಡಿಯೋ ಸಂವಾದದ ಮೂಲಕ ಹಾಗೂ ಸಭೆಗಳ ಮೂಲಕ ಕಟ್ಟು ನಿಟ್ಟಿನ ನಿರ್ದೇಶನ ನೀಡಲಾಗಿತ್ತು. ಆದರೆ ವಿಶ್ವನಾಥ ಗೌಡ.ಎಸ್ ಅವರು ತಮಗೆ ವಹಿಸಿದ ಕೆಲಸವನ್ನು ಸರಿಯಾಗಿ ನಿರ್ವಹಿಸುವಲ್ಲಿ ಬೇಜವಾಬ್ದಾರಿಯನ್ನು ತೋರಿಸಿರುತ್ತಾರೆ.

ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮ 1958ರ ನಿಯಮ 98 ರನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಅಮಾನತ್ತಿನ ಅವಧಿಯಲ್ಲಿ ನೌಕರರು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.










Discussion about this post