ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತನಾಗಿ ವರಿಷ್ಠರ ಸೂಚನೆಯಂತೆ ತಾನು ರಾಜಕೀಯ ನಿವೃತ್ತಿ ಪಡೆದಿದ್ದೇನೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಯಾಗಿದ್ದು, ಮೊದಲಿನಿಂದಲೂ ಇದೇ ತತ್ವವನ್ನು ಅನುಸರಿಸಿಕೊಂಡು ಬಂದಿದ್ದೇನೆ. ಅದರಂತೆ ಈ ಬಾರಿಯು ರಾಜಕೀಯಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ಪರ್ಯಾಯವಾಗಿ ತಮ್ಮ ಬೇಡಿಕೆಗಳಿವೆಯೇ ಎಂಬ ಪತ್ರಕರ್ತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಾವು ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ. ತಮ್ಮ ಪುತ್ರನಿಗೂ ಟಿಕೇಟ್ ಕೇಳಿಲ್ಲ. ರಾಜೀನಾಮೆ ಕೇಳಿದರು ಕೊಟ್ಟಿದ್ದೇನೆ. ಪಕ್ಷ ತಮಗೆ ಎಲ್ಲವನ್ನೂ ನೀಡಿದೆ. ಡಿಸಿಎಂ ಹುದ್ದೆ ನೀಡಿ ಗೌರವಿಸಿದೆ ತಾವು ಪಕ್ಷದ ನಿರ್ಧಾರಗಳಿಗೆ ಬದ್ಧನಾಗಿ ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಹಾಗೂ ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಶ್ರಮವಹಿಸುತ್ತೇನೆ. ಹೆಚ್ಚಿನ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಅಧಿಕಾರ ಬರಲು ಆಶಿಸುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post