No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2024
in ಬಳ್ಳಾರಿ
0
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಕರೆ ನೀಡಿದರು.‌

ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ ಧರ್ಮ ಸಂಸ್ಥೆ ನೀಡಿದ ಉಚಿತ ಮನೆಗಳನ್ನು ಹಸ್ತಾಂತರಿಸಿ ಮಾತನಾಡಿ, ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು.
ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.

Also read: ಕುವೆಂಪು ವಿವಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು.

ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು.
ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು.

ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.
ಕ್ರೈಸ್ತ ಧರ್ಮ ಗುರುಗಳು, ಕ್ರೈಸ್ತ ಸಂಸ್ಥೆಗಳು ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೂ ಶಿಕ್ಷಣ ಕೊಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ದೊಡ್ಡ ಕೊಡುಗೆ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಸಿಕ್ಕಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ ಎಂದರು.

ದೇವ ಒಂದೇ ನಾಮ ಹಲವು ಎನ್ನುವುದು ಎಲ್ಲರ ನಂಬಿಕೆ. ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶ ಎಂದು ಬಸವಾದಿ ಶರಣರು ಹೇಳಿದ್ದು ಈ ಕಾರಣಕ್ಕಾಗಿಯೇ ಎನ್ನುತ್ತಾ, ದೇವರಿಲ್ಲದ ಜಾಗವೇ ಇಲ್ಲ ಎನ್ನುವ ಸಂದೇಶವನ್ನು ಸಾರಿದ ಕನಕದಾಸರ ಬಾಳೆಹಣ್ಣಿನ ಕತೆಯನ್ನು ವಿವರಿಸಿದರು.

ಅಂಬೇಡ್ಕರ್ ಅವರು ಸಂವಿಧಾನ ಅಂಗೀಕಾರ ಸಭೆಯಲ್ಲಿ ಮಾಡಿದ ಭಾಷಣವನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು.

ಕ್ರೈಸ್ತ ಧರ್ಮದ ಮಹಾನ್ ಧರ್ಮಗುರು ಪೀಟರ್ ಮಚಾಡೋ, ಸಚಿವರಾದ ಕೆ.ಜೆ.ಜಾರ್ಜ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಸಕರಾದ ಭರತ್ ರೆಡ್ಡಿ, ನಾಗೇಂದ್ರ, ಅನ್ನಪೂರ್ಣ ತುಕಾರಾಮ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BallaryCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಳ್ಳಾರಿಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಕುವೆಂಪು ವಿವಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Next Post

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL