ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆಯ ಘನತೆಯನ್ನು ಎತ್ತಿ ಹಿಡಿಯಲು, ಮತದಾರರು ಆಕರ್ಷಕ ವಸ್ತುಗಳು, ಹಣ, ಉಡುಗೊರೆ ಮುಂತಾದವುಗಳಿಗೆ ಮರಳಾಗದೇ ನೈತಿಕ ಮತದಾನ ಮಾಡಿ ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ತರಬೇತಿ ಕೇಂದ್ರ, ಶುಶ್ರೂಣಾಧಿಕಾರಿಗಳ ತರಬೇತಿ ಕೇಂದ್ರ, ತಾಲ್ಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಗುರುವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮೂಡಿಸುವ ಜಾಥಾ ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಧೃಡ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಅತ್ಯಂತ ಅವಶ್ಯಕವಾಗಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದ ಮೌಲ್ಯವನ್ನು ಅರಿತು, ತಪ್ಪದೇ ಮತ ಚಲಾಯಿಸಬೇಕು. ಚುನಾವಣೆ ಸಂದರ್ಭದಲ್ಲಿ ತೋರಲಾಗುವ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ, ತಮಗೆ ಸೂಕ್ತವೆನಿಸುವ ಅಭ್ಯರ್ಥಿಗೆ ನಿರ್ಭೀತಿಯಿಂದ ನೈತಿಕ ಮತದಾನ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್ ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ, ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ, ಜಿಲ್ಲಾ ಸ್ವೀಪ್ ಸಮಿತಿಯ ಬಸವರಾಜ್ ಹಿರೇಮಠ್ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಡಾ.ಹನುಮಂತಪ್ಪ, ಡಾ.ರಾಜಶೇಖರ್, ಡಾ.ಕಾಶಿಪ್ರಸಾದ್, ಡಾ.ಸುರೇಖ, ಡಾ.ಶಗುಪ್ತಾ ಶಾಹಿನ್, ವಾಹನ ಅಭಿಯಂತರರು ವಿಜಯಕುಮಾರ್, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಹಾಗೂ ಮಹಾನಗರ ಪಾಲಿಕೆಯ ಸಿಬ್ಬಂದಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಅವರು ಮತದಾನ ಪ್ರತಿಜ್ಞೆ ವಿಧಿಯನ್ನು ಬೋಧಿಸಿದರು.
ಜಾಥಾದಲ್ಲಿ ಆರೋಗ್ಯ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಕಾರಿಗಳು ಮತದಾನ ಕುರಿತು ಜಾಗೃತಿ ಮೂಡಿಸುವ ಮಾಹಿತಿ ಫಲಕಗಳನ್ನು ಪ್ರದರ್ಶಿಸಿದರು.
Also read: ಶಿವಮೊಗ್ಗ-ಬೆಂಗಳೂರು ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್? ಎಂಪಿ ರಾಘವೇಂದ್ರ ಹೇಳಿದ್ದೇನು?
ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಆವರಣದಿಂದ ಆರಂಭವಾಗಿ ಸಂಗಮ್ ವೃತ್ತ, ಕೆ.ಸಿ ರಸ್ತೆ, ನಗರ ಬಸ್ ನಿಲ್ದಾಣ, ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೇ ನಿಲ್ದಾಣ, ಗಡಿಗಿ ಚೆನ್ನಪ್ಪ ವೃತ್ತ, ಸಂಗಮ್ ವೃತ್ತದ ಮೂಲಕ ಮರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಆವರಣಕ್ಕೆ ಮುಕ್ತಾಯಗೊಂಡಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post