ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆರ್’ಎಸ್’ಎಸ್’ಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ರಾಜ್ಯದಾದ್ಯಂತ ನಿಷೇಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆ, ಆರ್’ಎಸ್’ಎಸ್ ಭಾರತದ ಏಕತೆ ಮತ್ತು ಸಂವಿಧಾನದ ಸ್ಫೂರ್ತಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘವು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಮೈದಾನಗಳಲ್ಲಿ ಶಾಖೆಗಳನ್ನು ನಡೆಸುತ್ತಿದೆ. ಅಲ್ಲಿ ಘೋಷಣೆಗಳನ್ನು ಕೂಗಲಾಗುತ್ತದೆ. ಮಕ್ಕಳು ಮತ್ತು ಯುವಕರ ಮನಸ್ಸಿನಲ್ಲಿ ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಜನರಲ್ಲಿ ದ್ವೇಷವನ್ನು ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ, ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲ ತತ್ವಗಳ ಮೇಲೆ ಸ್ಥಾಪಿತವಾದ ನಮ್ಮ ಸಂವಿಧಾನವು ಅಂತಹ ಅಂಶಗಳನ್ನು ನಿಗ್ರಹಿಸಲು ಮತ್ತು ರಾಷ್ಟ್ರದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ನಮಗೆ ಅಧಿಕಾರವನ್ನು ನೀಡುತ್ತದೆ ಎಂದು ಸಚಿವರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಕಚೇರಿ ಇಂದು ಮಾಧ್ಯಮಗಳೊಂದಿಗೆ ಈ ಪತ್ರವನ್ನು ಹಂಚಿಕೊಂಡಿದ್ದು, ‘ಆರ್’ಎಸ್’ಎಸ್ ನಂಬಿಕೆ ವ್ಯವಸ್ಥೆಯು ಭಾರತದ ಏಕತೆ ಮತ್ತು ಜಾತ್ಯತೀತ ಚೌಕಟ್ಟಿನ ಆದರ್ಶಗಳಿಗೆ ವಿರುದ್ಧವಾಗಿದೆ’ ಎಂದು ಆಕ್ಷೇಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post