ನವದೆಹಲಿ: ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನೀಡಿರುವ ಭಾರತ್ ಬಂದ್ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೇ ಫ್ಲಾಪ್ ಆಗಿದೆ.
ನವದೆಹಲಿಯ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ವಾಹನ ಸಂಚಾರ ಹಾಗೂ ಜನಜೀವನ ಸಹಜವಾಗಿದೆ.
ರಾಜ್‌ಘಾಟ್ ಹಾಗೂ ರಾಮಲೀಲಾ ಮೈದಾನದ ಸುತ್ತಲೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಮುಖಂಡರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಪ್ರತಿಭಟನೆ ನಡೆಯುತ್ತಿದೆ.
ಕೋಲ್ಕತ್ತಾದಲ್ಲಿ ಇಂದು ಬೆಳಗ್ಗೆ ಜನಜೀವನ, ವಾಹನ ಸಂಚಾರ ಎಂದಿನಂತೆ ಸಾಗಿದೆ. ಸಾರ್ವಜನಿಕ ವಾಹನ ಸಾರಿಗೆ ಜಾಲ, ಬಸ್ಸುಗಳು, ಟ್ಯಾಕ್ಸಿಗಳು, ಟ್ರೈನ್ ಗಳು ವೇಳಾಪಟ್ಟಿ ಪ್ರಕಾರ ಓಡಾಡುತ್ತಿವೆ.
Discussion about this post