ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸಲು ಪ್ರತಿ ಕಂಬಳಕ್ಕೆ 5ಲಕ್ಷ ರೂ. ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5ಲಕ್ಷ ರೂ.ಗಳಂತೆ 50ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5ಲಕ್ಷ ರೂ.ಗಳಂತೆ 10ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲಾಗಿದೆ.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ೫ಲಕ್ಷ ರೂ.ಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post