ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ – ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಅನುಮೋದನೆ ನೀಡಿದೆ.
ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ Minister M B Patil ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 143 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು ₹ 6407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 33,771 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ₹ 485 ಕೋಟಿ ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹484.33 ಕೋಟಿ ಮೊತ್ತದ ವಿಜ್ಞಾನ , ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ ₹415 ಕೋಟಿ ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಮುಂತಾದವು ಸೇರಿವೆ.
₹ 50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹ 4230.64 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 24,846 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
₹ 15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 104 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹2056.68 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 8,425 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ.
Also read: ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ ₹120.50 ಕೋಟಿ ಬಂಡವಾಳ ಹೂಡಿಕೆ ಆಗಲಿದ್ದು, 500 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್. ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಅನುಮೋದನೆ ನೀಡಿರುವ ಪ್ರಮುಖ ಪ್ರಸ್ತಾವನೆಗಳು ಹೀಗಿವೆ
ಸಂಸ್ಥೆಯ ಹೆಸರು ಸ್ಥಳ ಬಂಡವಾಳ ಹೂಡಿಕೆ
₹ ಕೋಟಿಗಳಲ್ಲಿ ಉದ್ಯೋಗ ಅವಕಾಶ
- ಜಯಡಿ ಟೆಕ್ಮ್ಯಾಕ್ ಪ್ರೈವೇಟ್ ಲಿಮಿಟೆಡ್: ಬೆಳಗಾವಿ ಜಿಲ್ಲೆ, 485 ₹ ಕೋಟಿ, 1025 ಉದ್ಯೋಗ ಅವಕಾಶ
- ಗೋಕುಲ ಎಜುಕೇಷನ್ ಫೌಂಡೇಷನ್ (ವೈದ್ಯಕೀಯ) ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಜಿಲ್ಲೆ, 484.33 ₹ ಕೋಟಿ, 660 ಉದ್ಯೋಗ ಅವಕಾಶ
- ಧರಿವಾಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ಪುಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ 465 ₹ ಕೋಟಿ, 1500 ಉದ್ಯೋಗ ಅವಕಾಶ
- ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಬೆಂಗಳೂರು, ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, 415 ₹ ಕೋಟಿ, 350 ಉದ್ಯೋಗ ಅವಕಾಶ
- ಶಿವಾ ಆಂಡ್ ಶಿವಾ ಅರ್ಥೊಪೆಡಿಕ್ ಹಾಸ್ಪಿಟಲ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ, 255 ₹ ಕೋಟಿ, 3830 ಉದ್ಯೋಗ ಅವಕಾಶ
- ಯುಆರ್ಸಿ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ, 228.73 ₹ ಕೋಟಿ, 371 ಉದ್ಯೋಗ ಅವಕಾಶ
- ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಷನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 155.50 ₹ ಕೋಟಿ, 206 ಉದ್ಯೋಗ ಅವಕಾಶ
- ವೈರ್ಮನ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 95 ₹ ಕೋಟಿ, 500 ಉದ್ಯೋಗ ಅವಕಾಶ
- ಸ್ಟ್ರೇಪರವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರಾಮನಗರ ಜಿಲ್ಲೆ, ಹಾರೋಹಳ್ಳಿ, 65 ₹ ಕೋಟಿ, 432 ಉದ್ಯೋಗ ಅವಕಾಶ
- ಕಲ್ಕತ್ತಾ ಇಸ್ಪತ್, ಬೆಂಗಳೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 60.34 ₹ ಕೋಟಿ, 100 ಉದ್ಯೋಗ ಅವಕಾಶ
- ಔರೇಲಿಯಾ ಪ್ರಾಜಕ್ಟ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 55 ₹ ಕೋಟಿ, 100 ಉದ್ಯೋಗ ಅವಕಾಶ
- ಕ್ಲೌಡ್ ವೇವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 52 ₹ ಕೋಟಿ, 262 ಉದ್ಯೋಗ ಅವಕಾಶ
- ಸುದರ್ಶನ ಎಕ್ಸ್ಟ್ರುಷನ್ಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ, 50 ₹ ಕೋಟಿ, 140 ಉದ್ಯೋಗ ಅವಕಾಶ
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post