ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ #NewDelhi ಅಕ್ರಮ ಬಾಂಗ್ಲಾದೇಶಿಗರ #Bangladeshiವಿರುದ್ಧ ಸಮರ ಸಾರಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ.
ರಾಜ್ಯದಾದ್ಯಂತ 25 ಪಾಕಿಸ್ಥಾನಿಗಳು #Pakistanis ಸೇರಿದಂತೆ ಒಟ್ಟು 137 ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ.
ಈ ಕುರಿತಂತೆ ಮಾತನಾಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, #Home Minister G Paremeshwar ಬೆಂಗಳೂರು ನಗರದಲ್ಲಿ 84, ಬೆಂಗಳೂರು ಗ್ರಾಮಾಂತರದಲ್ಲಿ 27, ಶಿವಮೊಗ್ಗದಲ್ಲಿ 12, ಹಾಸನದಲ್ಲಿ ಮೂವರು, ಮಂಗಳೂರಿನಲ್ಲಿ ಒಬ್ಬರು ಮತ್ತು ಉಡುಪಿಯಲ್ಲಿ 10 ಅಕ್ರಮ ವಲಸಿಗರು ಪತ್ತೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹಿರಿಯ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ #Basavanagowda Patil Yatnal ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಉತ್ತರ ನೀಡಿರುವ ಗೃಹ ಸಚಿವರು, ವಿದೇಶಾಂಗ ಸಚಿವಾಲಯದ ಮೂಲಕ ಅವರ ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಶೀಘ್ರದಲ್ಲೇ ಆಯಾ ದೇಶಗಳಿಗೆ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ, 2016 ರಲ್ಲಿ 33 ಬಾಂಗ್ಲಾದೇಶಿಗಳನ್ನು ಪತ್ತೆಹಚ್ಚಲಾಗಿದ್ದು, ಅವರೆಲ್ಲರನ್ನೂ ಆಗ ಗಡೀಪಾರು ಮಾಡಲಾಗಿದೆ. ವಿಜಯಪುರದಲ್ಲಿ ಈಗ ಯಾವುದೇ ಅಕ್ರಮ ವಲಸಿಗರು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Also read: ದೇವಾಲಯಗಳ ಅರ್ಚಕರು/ನೌಕರರ ವೇತನ ತಾರತಮ್ಯ | ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ | ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವ ಆಫ್ರಿಕನ್ ಪ್ರಜೆಗಳ ಬಗ್ಗೆ ಸರ್ಕಾರ ಗಂಭೀರವಾಗಿದ್ದು ಅವರ ಮೇಲೆ ನಿಗಾ ಇಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಹಾಸನ, ಚಿಕ್ಕಮಗಳೂರು ಮತ್ತು ಸಕಲೇಶಪುರದ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಬಾಂಗ್ಲಾದೇಶಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಸ್ಟೇಟ್ ಮಾಲೀಕರು ಅವರಿಗೆ ಪಡಿತರ ಚೀಟಿಗಳು ಮತ್ತು ಚುನಾವಣಾ ಚೀಟಿಗಳನ್ನು ಪಡೆದುಕೊಂಡಿದ್ದರು.
ವಿಜಯಪುರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಘಟಕವನ್ನು ಸ್ಥಾಪಿಸಬೇಕೆಂಬ ಯತ್ನಾಳ್ ಅವರ ಮನವಿಯ ಮೇರೆಗೆ, ಕೇಂದ್ರವು ಸ್ವಂತವಾಗಿ ನಿರ್ಧರಿಸಬೇಕಾಗಿರುವುದರಿಂದ ರಾಜ್ಯವು ಪ್ರಸ್ತಾವನೆಯನ್ನು ಕಳುಹಿಸಬೇಕಾಗಿಲ್ಲ ಎಂದು ಸಚಿವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post