No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

‘ಸೂಪರ್‌ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ‌ ಬಿಇ ಕಾಲೇಜುಗಳ ಆಯ್ಕೆ: ‌ಸಚಿವ ಅಶ್ವತ್ಥ ನಾರಾಯಣ್

ಆಯ್ಕೆಯಾಗಿರುವ ಇಂಜಿನಿಯರಿಂಗ್ ಕಾಲೇಜುಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
July 24, 2022
in ಬೆಂಗಳೂರು ನಗರ
0
‘ಸೂಪರ್‌ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ‌ ಬಿಇ ಕಾಲೇಜುಗಳ ಆಯ್ಕೆ: ‌ಸಚಿವ ಅಶ್ವತ್ಥ ನಾರಾಯಣ್
Share on FacebookShare on TwitterShare on WhatsApp

 ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |          

ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ ಎಂದು ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ Minister Ashwath Narayan  ಹೇಳಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ Vishweshwaraiah Technical University ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ ಸಮಿತಿಯು ಮಂಗಳವಾರ ಸರಕಾರಕ್ಕೆ ತನ್ನ ವರದಿ ಸಲ್ಲಿಸಿತು. ಇದರ ಅಂಗವಾಗಿ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ವರದಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, `ಜಿಲ್ಲೆಗೆ ತಲಾ ಒಂದರಂತೆ ಒಟ್ಟು 30 ಕಾಲೇಜುಗಳನ್ನು `ಪ್ರಾದೇಶಿಕ ಉತ್ಕೃಷ್ಟ ತಾಂತ್ರಿಕ ಶಿಕ್ಷಣ ವ್ಯವಸ್ಥೆ (`ರೀತಿ’) ಯೋಜನೆಯಡಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇವುಗಳನ್ನು ಪರಿಪೋಷಣೆ (ಇನ್ಕ್ಯುಬೇಷನ್), ಆ್ಯಕ್ಸಲೇಟರ್ ಮತ್ತು ಸೂಪರ್-30 ಎನ್ನುವ ಮೂರು ವಿಭಾಗಗಳಡಿ ಪರಿಗಣಿಸಲಾಗಿದೆ. ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಎಂಜಿನಿಯರಿಂಗ್ ಸಂಸ್ಥೆಗಳನ್ನು ಆರಿಸಿಕೊಳ್ಳಲಾಗಿದೆ’ ಎಂದರು.

`ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಗಳಲ್ಲೇ ಅತ್ಯುನ್ನತ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲು ಹೋದ ವರ್ಷದ ನವೆಂಬರಿನಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿತ್ತು. ಜತೆಗೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸೂಕ್ತ ಖಾಸಗಿ/ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಲು ಸರ್ಕಾರದ ನವೋದ್ಯಮ ವಿಷನ್ ಗ್ರೂಪ್ ಮುಖ್ಯಸ್ಥರಾದ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಗಿತ್ತು’ ಎಂದು ಅವರು ಹೇಳಿದರು.
ಕಾಲೇಜು ಆಡಳಿತ‌ ಮಂಡಳಿ, ಉದ್ಯಮರಂಗ ಮತ್ತು ವಿಟಿಯು ಮೂರೂ ಸೇರಿಕೊಂಡು `ರೀತಿ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಿದ್ದು, ತಲಾ ಶೇ.33ರಷ್ಟು ವೆಚ್ಚ ಭರಿಸಲಿವೆ. ಇದು ಐತಿಹಾಸಿಕ ಕ್ರಮವಾಗಿದ್ದು, ಇದಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸೂಕ್ತ ಅವಕಾಶ ಒದಗಿಸಿದೆ. 2 ಮತ್ತು 3ನೇ ಸ್ತರದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳನ್ನು ಉನ್ನತೀಕರಿಸುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಔದ್ಯಮಿಕ ಅರಿವು ಮತ್ತು ಸಂಶೋಧನೆ ಆಧರಿತ ತಾಂತ್ರಿಕ ಶಿಕ್ಷಣ ನೀಡುವುದು ಇದರ ಹೆಗ್ಗುರಿಯಾಗಿದೆ. ಈ ಮೂಲಕ ರಾಜ್ಯದ ಉದ್ದಗಲಕ್ಕೂ ಉತ್ಕೃಷ್ಣ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿರಬೇಕೆಂಬ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಈ ಕಾಲೇಜುಗಳಲ್ಲಿ ವಿದ್ಯಾರ್ಥಿಕೇಂದ್ರಿತ ಕೌಶಲ್ಯ ಮತ್ತು ಸಂಶೋಧನಾ ಬಹುಶಿಸ್ತೀಯ ಶಿಕ್ಷಣ ಒದಗಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಿ, ಅವರಲ್ಲಿ ಉದ್ಯಮಶೀಲತೆಯನ್ನೂ ಬೆಳೆಸಲಾಗುವುದು. ಜತೆಗೆ, ಈ 30 ಕಾಲೇಜುಗಳಲ್ಲಿ ಸ್ವಯಂ ಮೌಲ್ಯಮಾಪನ ಮತ್ತು `ಮೆಂಟರ್-ಆಡಿಟ್ ಮಾದರಿ’ ಮೂಲಕ ಉತ್ತರದಾಯಿತ್ವವನ್ನು ತರಲಾಗುವುದು ಎಂದು ಸಚಿವರು ವಿವರಿಸಿದರು.
ಈ ವರದಿಯನ್ನು ಸಲ್ಲಿಸಿರುವ ಪ್ರೊ.ಕರಿಸಿದ್ದಪ್ಪ ನೇತೃತ್ವದ ಸಮಿತಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಉದ್ಯಮಿ ನಾರಾಯಣನ್ ರಾಮಸ್ವಾಮಿ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಲಹೆಗಾರ ಕಾರ್ತಿಕ್ ಕಿಟ್ಟು ಮತ್ತು ವಿಟಿಯು ಕುಲಸಚಿವ ಆನಂದ್ ದೇಶಪಾಂಡೆ ಇದ್ದರು.

‘ರೀತಿ’ಗೆ ಷರತ್ತುಗಳು:
ಈ ಕಾಲೇಜುಗಳು ಅತ್ಯುತ್ಕೃಷ್ಟ ಮಟ್ಟವನ್ನು ಸಾಧಿಸಲು ಹಲವು ನಿಯಮಗಳನ್ನು ಪಾಲಿಸಲಾಗುವುದು. ಆ ನಿಯಮಗಳು ಹೀಗಿವೆ:

  • ಕಾಲೇಜುಗಳು ಅಪೇಕ್ಷಿತ ಮಟ್ಟವನ್ನು ಮುಟ್ಟಲು ವಿಫಲವಾದಲ್ಲಿ ಮಧ್ಯದಲ್ಲೇ `ಸೂಪರ್-30’ ಸ್ಥಾನಮಾನವನ್ನು ಹಿಂತೆಗೆದುಕೊಳ್ಳಲಾಗುವುದು.
  • ಮೂರು ವರ್ಷದಲ್ಲಿ NIRF ranking ಪಡೆಯಬೇಕು. ಐದು ವರ್ಷದೊಳಗೆ ವಿಶ್ವಮಟ್ಟದ ಸಂಸ್ಥೆಗಳಿಂದ ಮಾನ್ಯತೆ ಪಡೆಯಬೇಕು.
  • ಯೋಜನೆಯ ಅವಧಿಯಾದ 5 ವರ್ಷಗಳ ಕೊನೆಯ ವೇಳೆಗೆ ಈ ಕಾಲೇಜುಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮಗಳ ಪೈಕಿ ಶೇ.80ರಷ್ಟಕ್ಕಾದರೂ ಎನ್.ಬಿ.ಎ ಮಾನ್ಯತೆ ಹೊಂದಿರಬೇಕು.
  • ಅಂತಿಮ ವರ್ಷದ ಬಿ.ಇ.ಯಲ್ಲಿರುವ ವಿದ್ಯಾರ್ಥಿಗಳು ತಮ್ಮ ಪದವಿ ಪಡೆಯುವ ಹೊತ್ತಿಗೆ ಶೇ.50ರಷ್ಟು ವಿದ್ಯಾರ್ಥಿಗಳಾದರೂ ಉದ್ಯೋಗಾವಕಾಶ ಗಿಟ್ಟಿಸಿಕೊಂಡಿರಬೇಕು.
  • ಆಯಾ ಕಾಲೇಜುಗಳಲ್ಲಿ ಶೇ.75ರಷ್ಟು ವಿದ್ಯಾರ್ಥಿಗಳು ಪ್ರತೀ ವರ್ಷವೂ ಗುಣಮಟ್ಟದ ಇಂಟರ್ನ್-ಶಿಪ್ ಅನ್ನು ಕಡ್ಡಾಯವಾಗಿ ಮಾಡಬೇಕು. 5 ವರ್ಷದಲ್ಲಿ ಶೆ.100 ರಷ್ಟು ಪ್ಲೇಸ್ ಮೆಂಟ್ ಸಿಗಬೇಕು.
  • ಅಗತ್ಯವೆನಿಸಿದರೆ ವಿಟಿಯು ಕಡೆಯಿಂದ ಶಾಶ್ವತ ಮಾನ್ಯತೆ ಪಡೆದುಕೊಳ್ಳಬೇಕು.
  • ಜಿಲ್ಲೆ ಅಭಿವೃದ್ಧಿಗೆ ಸಂಬಂದಿಸಿದಂತೆ ಕನಿಷ್ಠ 10 ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಬೇಕು.
  • 25 ಉದ್ಯಮಿಗಳನ್ನು ಸೃಷ್ಟಿಸಬೇಕು.

ಆಯ್ಕೆಯಾಗಿರುವ ಸರಕಾರಿ ಕಾಲೇಜುಗಳು:
ಚಾಮರಾಜನಗರ, ಚಳ್ಳಕೆರೆ, ಹಾಸನ, ಹಾವೇರಿ, ಕುಶಾಲನಗರ, ತಲಕಾಡು, ಕೃಷ್ಣರಾಜಪೇಟೆ, ರಾಯಚೂರು, ರಾಮನಗರ, ಕಾರವಾರ, ಹೂವಿನಹಡಗಲಿಗಳಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ., ದಾವಣಗೆರೆಯಲ್ಲಿರುವ ಯೂನಿವರ್ಸಿಟಿ ಬಿಡಿಟಿ ಕಾಲೇಜು ಮತ್ತು ಕಲಬುರಗಿಯಲ್ಲಿರುವ ವಿಟಿಯು ಪಿಜಿ ಸೆಂಟರ್.
ಆಯ್ಕೆಯಾಗಿರುವ ಖಾಸಗಿ ಕಾಲೇಜುಗಳು

  1. ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್, ಬೆಳಗಾವಿ
  2. ಚನ್ನಬಸವೇಶ್ವರ ಎಂಜಿನಿಯರಿಂಗ್ ಕಾಲೇಜು, ಗುಬ್ಬಿ (ತುಮಕೂರು ಜಿಲ್ಲೆ)
  3. ಶ್ರೀಮಧ್ವ ವಾದಿರಾಜ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಕಾಲೇಜು, ಉಡುಪಿ
  4. ಜಿಎಸ್ಎಸ್ಎಸ್ ಮಹಿಳಾ ಎಂಜಿನಿಯರಿಂಗ್ & ಟೆಕ್ನಾಲಜಿ ಸಂಸ್ಥೆ, ಮೈಸೂರು.
  5. ಡಾ.ಟಿ ತಿಮ್ಮಯ್ಯ ತಾಂತ್ರಿಕ ಶಿಕ್ಷಣ ಕಾಲೇಜು, ಕೆಜಿಎಫ್ (ಕೋಲಾರ ಜಿಲ್ಲೆ)
  6. ಬಿಳುಗೂರು ಗುರುಬಸವ ಮಹಾಸ್ವಾಮೀಜಿ ಇನ್ಸ್ಟಿಟ್ಯೂಟ್, ಮುಧೋಳ (ಬಾಗಲಕೋಟೆ ಜಿಲ್ಲೆ)
  7. ಪಿ.ಜಿ.ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ, ವಿಜಯಪುರ
  8. ಆದಿಚುಂಚನಗಿರಿ ತಾಂತ್ರಿಕ ಕಾಲೇಜು, ಚಿಕ್ಕಮಗಳೂರು
  9. ಎಸ್.ಜೆ.ಸಿ. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ, ಚಿಕ್ಕಬಳ್ಳಾಪುರ
  10. ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು, ಬಳ್ಳಾರಿ
  11. ಪಿಇಎಸ್ ತಾಂತ್ರಿಕ & ಮ್ಯಾನೇಜ್ಮೆಂಟ್ ಸಂಸ್ಥೆ, ಶಿವಮೊಗ್ಗ
  12. ಭೀಮಣ್ಣ ಖಂಡ್ರೆ ತಾಂತ್ರಿಕ ಕಾಲೇಜು, ಭಾಲ್ಕಿ (ಬೀದರ್ ಜಿಲ್ಲೆ)
  13. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಗದಗ
  14. ವಿವೇಕಾನಂದ ಎಂಜಿನಿಯರಿಂಗ್ & ತಾಂತ್ರಿಕ ಕಾಲೇಜು, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ)
  15. ಜೈನ್ ಎಂಜಿನಿಯರಿಂಗ್ ಕಾಲೇಜು, ಹುಬ್ಬಳ್ಳಿ
  16. ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜು, ಶೋರಾಪುರ (ಯಾದಗಿರಿ ಜಿಲ್ಲೆ)

ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ, ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 95 ಕೋಟಿ ರೂ.

ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ. ಸದಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ಯೋಜನೆಯ ಅಡಿಯಲ್ಲಿ ಹಾಸನ, ಹಾವೇರಿ, ಕೆ.ಆರ್. ಪೇಟೆ, ಕಾರವಾರ, ರಾಮನಗರ ಮತ್ತು ತಳಕಲ್ ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಬೆಂಗಳೂರಿನ ಎಸ್.ಕೆ.ಎಸ್.ಜೆ.ಐ.ಟಿ. ಕಾಲೇಜನ್ನು ಕೆಐಟಿ ಆಗಿ ಉನ್ನತೀಕರಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಡಗೋಪನ್ ಅವರು ಬೆಂಗಳೂರಿನ ಐಐಐಟಿಯ ಸ್ಥಾಪಕ ನಿರ್ದೇಶಕರು:
ಈ ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ಹೆಚ್ಚಿನ ಬೇಡಿಕೆ ಮತ್ತು ಉದ್ಯೋಗಾವಕಾಶ ಇರುವ ತಲಾ 2 ವಿಭಾಗಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ ಆಗಿ ಬೆಳೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಸಂಶೋಧನೆ, ನಾವೀನ್ಯತೆ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕೆ ಸರಕಾರ ಉತ್ತೇಜನ ನೀಡುತ್ತಿದೆ. ಇದಕ್ಕಾಗಿ ವಿದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿತ್ವ ಒಡಂಬಡಿಕೆಗಳನ್ನು ಈ ಕಾಲೇಜುಗಳು ಮಾಡಿಕೊಳ್ಳಲಿವೆ. ಈ ಮೂಲಕ ಇವುಗಳನ್ನು ಅಂತಾರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಈ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 95 ಕೋಟಿ ರೂ. ಅಗತ್ಯವಿದ್ದು, ಈಗಾಗಲೇ 21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾರ್ಯಪಡೆಯು ಈ ಕಾಲೇಜುಗಳ ಉನ್ನತೀಕರಣಕ್ಕೆ ಎರಡು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ ಸಲ್ಲಿಸಲಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಈ ಕಾಲೇಜುಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಚಟುವಟಿಕೆಗಳನ್ನು ಸೂಚಿಸಲಿದೆ ಎಂದು ಸಚಿವರು ನುಡಿದಿದ್ದಾರೆ.   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Ashwath NarayanNewsinKannadaNewsKannadaState NewsVishweshwaraiah Technical Universityಬೆಂಗಳೂರುವಿಶ್ವೇಶ್ವರಯ್ಯ ತಾಂತ್ರಿಕ ವಿವಿಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾವಿನಲ್ಲೂ ಸಮಾಜಕ್ಕೆ ಮಾದರಿಯಾದ ಅಶೋಕ್ ಯಾದವ್: ಸಿಮ್ಸ್ ಕಾಲೇಜಿಗೆ ದೇಹದಾನ

Next Post

ಚಾಮುಂಡಿಬೆಟ್ಟದಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಲಾಡು ವಿತರಣೆ

kalpa News

kalpa News

Next Post
ಚಾಮುಂಡಿಬೆಟ್ಟದಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಲಾಡು ವಿತರಣೆ

ಚಾಮುಂಡಿಬೆಟ್ಟದಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಲಾಡು ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL