ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವಂತೆ ಚಿರತೆ ದಾಳಿಯಿಂದ ಮೃತಪಟ್ಟಿರುವವರ ಕುಟುಂಬಕ್ಕೂ ಸಹ 15 ಲಕ್ಷ ರೂ. ಪರಿಹಾರ ಧನ ನೀಡಲಾಗುವುದು ಎಂದರು.
ಕಾಡಿನಲ್ಲಿದ್ದ ಚಿರತೆಗಳು ಈಗ ನಾಡಿನತ್ತ ಬರುತ್ತಿದ್ದು ಬೆಂಗಳೂರಿನ ಸುತ್ತಮುತ್ತ ಓಡಾಡುತ್ತಿರುವುದು ಜನತೆಯನ್ನು ಭಯಭೀತಗೊಳಿಸಿದೆ. ಚಿರತೆಯನ್ನು ಜೀವಂತವಾಗಿ ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ. ಬೆಂಗಳೂರು ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕಂಡುಬAದಿರುವ ಚಿರತೆಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
Also read: ಗಮನಿಸಿ! ಈ ಎರಡು ದಿನ ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ಸಂಚಾರ ವಿಳಂಬ
ಚಿರತೆ ಸೆರೆಗೆ ವಿಶೇಷ ತಂಡ ರಚನೆ:
ಬೆಂಗಳೂರು ಹಾಗೂ ಮೈಸೂರು ವಲಯದ ಆನೆ ಕಾರಿಡಾರ್ ಸುತ್ತಮುತ್ತ ಕಂಡುಬAದಿರುವ ಚಿರತೆಗಳನ್ನು ಸೆರೆ ಹಿಡಿಯಲು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು ಹೊರವಲಯದ ತುರಹಳ್ಳಿಯಲ್ಲಿ ಚಿರತೆ ಕಾಣಿಸಿಕೊಂಡು ಸುತ್ತಮುತ್ತಲ ಜನರಲ್ಲಿ ತೀವ್ರ ಆತಂಕವನ್ನುAಟುಮಾಡಿದೆ. ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post