No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೊರೋನಾ 3ನೇ ಅಲೆ ಎದುರಿಸಲು ಕೇಂದ್ರದಿಂದ 1500 ಕೋಟಿ ನೆರವು: ಸಚಿವ ಸುಧಾಕರ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 11, 2021
in ಬೆಂಗಳೂರು ನಗರ
0
ಕೊರೋನಾ 3ನೇ ಅಲೆ ಎದುರಿಸಲು ಕೇಂದ್ರದಿಂದ 1500 ಕೋಟಿ ನೆರವು: ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂ.ಗಳ ನೆರವು ದೊರೆತಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕೊರೋನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು, ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಕರೋನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ ಎಂದರು.

ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೋನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾಧರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಜಯನಗರ ಭಾಗದಲ್ಲಿ ಮತ್ತೊಂದು ನೂತನ ಆಸ್ಪತ್ರೆ ಪ್ರಾರಂಭವಾಗುತ್ತಿರುವುದು ಬಹಳ ಸಂತಸದ ವಿಷಯ. ಕರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆ ಸೌಲಭ್ಯಗಳ ದೊರೆಯದೆ ಇದ್ದಂತಹ ಸಂಧರ್ಭದಲ್ಲಿ ಇದರ ಮಹತ್ವವನ್ನು ನಾವು ತಿಳಿದುಕೊಂಡಿದ್ದೇವೆ. ಹೆಲ್ತ್‌ ಕಾರ್ಡ್ ಗಳ ಮೂಲಕ ಹಾಗೂ ನಿರ್ದಿಷ್ಟ ದರವನ್ನು ನಿಗದಿಪಡಿಸುವ ಮೂಲಕ ಉತ್ತಮ ಸೇವೆಯನ್ನು ನೀಡುವ ಭರವಸೆಯನ್ನು ಇಲ್ಲಿನ ವೈದ್ಯಕೀಯ ಮಂಡಳಿ ನೀಡಿರುವುದು ಸಂತಸದ ವಿಷಯ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‌ ಖಂಡ್ರೆ ಮಾತನಾಡಿ, ಯುನೈಟೆಡ್‌ ಆಸ್ಪತ್ರೆ ಕಲಬುರಗಿಯಲ್ಲಿ ಹಾಗೂ ಹೈದ್ರಬಾದ್‌ ಕರ್ನಾಟಕ ಭಾಗದಲ್ಲಿ ಕರೋನಾ ಸಾಂಕ್ರಾಮಿಕ ಸಂಧರ್ಭದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದೆ. ಬೆಂಗಳೂರು ಹೊರತುಪಡಿಸಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದ ರಾಜ್ಯದ ಮೊದಲ ಖಾಸಗಿ ಆಸ್ಪತ್ರೆ ಎನ್ನುವುದು ಇದರ ಹೆಗ್ಗಳಿಕೆ. ಚಿಕಿತ್ಸೆ ಮೊದಲು ಎನ್ನುವ ಧ್ಯೇಯ ವಾಕ್ಯದ ಮೂಲಕ ಉತ್ತಮ ಚಿಕಿತ್ಸೆಯನ್ನು ಯುನೈಟೆಡ್‌ ಆಸ್ಪತ್ರೆಯ ತಂಡ ನೀಡಿರುವುದು ಬಹಳ ಸಂತಸದ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಗಳಖೋಡ-ಜಿಡಗಾ ಮಠದ ಪೀಠಾಧಿಪತಿಗಳಾದ ಶ್ರೀ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಯುನೈಟೆಡ್‌ ಆಸ್ಪತ್ರೆಯ ಸಿಎಂಡಿ ಡಾ ವಿಕ್ರಮ್‌ ಸಿದ್ದಾರೆಡ್ಡಿ, ಮಾಜಿ ಕೇಂದ್ರ ಸಚಿವೆ ರಾಣಿ ಸತೀಶ್‌, ಮಾಜಿ ಸಚಿವೆ ಪಿಜಿಆರ್‌ ಸಿಂಧ್ಯಾ, ಶಾಸಕ ಪಿ ರಾಜೀವ, ಯುನೈಟೆಡ್‌ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಅವರಿಗೆ, ಆಸ್ಪತ್ರೆಯ ನಿರ್ದೇಶಕರಾದ ಶ್ರೀಮತಿ ಡಾ. ವೀಣಾ ವಿಕ್ರಮ್‌ ಸಿದ್ಧಾರೆಡ್ಡಿ ಹಾಗೂ ಡಾ. ರಾಜೀವ್‌ ಬಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreCorona VaccineKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaState NewsUnited Hospitalಕೊರೋನಾ ಲಸಿಕೆಬೆಂಗಳೂರುಯುನೈಟೆಡ್‌ ಆಸ್ಪತ್ರೆಸಚಿವ ಸುಧಾಕರ್
Share198Tweet123Send
Previous Post

ಭದ್ರಾವತಿ: ಮರಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

Next Post

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

April 7, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL