ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ #PM Narendra Modi ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಂಗಳವಾರ ಹೇಳಿದರು.
ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ವಿಧಾನಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಸತಿ , ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೀಗೆ ಹೇಳಿದರು.

Also read: ಏರ್ ಟ್ರಾಫಿಕ್ ಕಂಟ್ರೋಲರ್ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ದುರಂತ
ರಾಜ್ಯದಲ್ಲಿ ಒಟ್ಟು 2865 ಕೊಳೆಗೇರಿಗಳಿದ್ದು, ಆ ಪೈಕಿ 635 ಕೊಳಗೇರಿಗಳು ಬೆಂಗಳೂರಿನಲ್ಲಿ ಇವೆ. ಕೊಳೆಗೇರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ 3,682 ಕೋಟಿ ಹಣ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಈ ಬಗ್ಗೆ ಕೇಂದ್ರ ವಸತಿ ಹಾಗೂ ಕೊಳೆಗೇರಿ ಮಂಡಳಿ ಸಚಿವರ ಗಮನ ಸೆಳೆಯಲು ಕೂಡ ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಯೋಜನೆಗೆ ವಿಶೇಷವಾಗಿ ಈ ಮೇಲ್ಕಂಡ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರ ರೂ. 660 ಕೋಟಿ ಹಣ ಬಿಡುಗಡೆ ಮಾಡಬೇಕೆಂದು ದೆಹಲಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವಂತೆ ಗಮನಹರಿಸಬೇಕಿದೆ ಎಂದು ಸಭೆ ಅಭಿಪ್ರಾಯಪಟ್ಟಿತು.
ರಾಜ್ಯದೆಲ್ಲೆಡೆ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ ಜಿಲ್ಲಾ ಹಾಗೂ ತಾಲ್ಲೂಕುವಾರು 171 ಹೊಸ ಪ್ರಸ್ತಾವನೆಗಳನ್ನ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕಾಗಿ 60: 40 ಹಂಚಿಕೆ ಸೂತ್ರದಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಅಲ್ಪಸಂಖ್ಯಾತರ ಕಾಲೊನಿಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಇದೆ ವೇಳೆ ಜಮೀರ್ ಅವರು ತಿಳಿಸಿದರು.
ಕೇಂದ್ರ ನಗರಾಭಿವೃದ್ಧಿ, ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತಾವನೆಗಳಿಗೆ ಅನುಮತಿ ದೊರಕಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮ ವಹಿಸುವುದಾಗಿ ಜಯಚಂದ್ರ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post