No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮನೆ ನಿರ್ಮಾಣಕ್ಕೆ ಶೇ.18ರಷ್ಟು ಜಿ.ಎಸ್.ಟಿ | ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ

ವಿವಿಧ ವಸತಿ ಯೋಜನೆಗಳ ಪ್ರಗತಿ ಕುರಿತು ವಿಧಾನಸೌಧದಲ್ಲಿ ಸಭೆ

kalpa News by kalpa News
January 1, 2025
in ಬೆಂಗಳೂರು ನಗರ
0
ಮನೆ ನಿರ್ಮಾಣಕ್ಕೆ ಶೇ.18ರಷ್ಟು ಜಿ.ಎಸ್.ಟಿ | ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ #PM Narendra Modi ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಂಗಳವಾರ ಹೇಳಿದರು.

ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ವಿಧಾನಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಸತಿ , ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೀಗೆ ಹೇಳಿದರು.
ಶೇಕಡಾ 18ರಷ್ಟು ಜಿ.ಎಸ್.ಟಿ.ಯಿಂದಾಗಿ ಮನೆ ನಿರ್ಮಾಣಕ್ಕೆ #18%GST for House Construction ಫಲಾನುಭವಿಗಳು ತಲಾ ಒಂದೂವರೆ ಲಕ್ಷ ರೂಪಾಯಿ ಪಾವತಿಸಬೇಕಾಗುತ್ತಿದೆ. ಇದು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಹೊರೆಯಾಗಿ ಪರಿಣಾಮಿಸಿದ್ದು, ಅಧಿಕ ಹಣ ಪಾವತಿ ಸಾಧ್ಯವಾಗುತ್ತಿಲ್ಲ ಹೀಗಾಗಿ ಬಡವರ ಮನೆ ನಿರ್ಮಾಣಕ್ಕೆ ವಿಧಿಸುತ್ತಿರುವ ಜಿ.ಎಸ್.ಟಿ. ತೆರಿಗೆ ರದ್ದುಗೊಳಿಸಬೇಕಾದ ತುರ್ತು ಅಗತ್ಯವಿರುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿದೆ ಎಂದು ಸಚಿವ ಜಮೀರ್ ಅವರು ಸಭೆಯಲ್ಲಿ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಯಚಂದ್ರ ಅವರು, ಈ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಇಡೀ ದೇಶದ ಬಡ ಜನತೆಗೆ ಅನುಕೂಲವಾಗುವಂತಹ ನಿರ್ಧಾರ ತೆಗೆದುಕೊಳ್ಳುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

Also read: ಏರ್ ಟ್ರಾಫಿಕ್ ಕಂಟ್ರೋಲರ್ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ದುರಂತ

ರಾಜ್ಯದಲ್ಲಿ ಒಟ್ಟು 2865 ಕೊಳೆಗೇರಿಗಳಿದ್ದು, ಆ ಪೈಕಿ 635 ಕೊಳಗೇರಿಗಳು ಬೆಂಗಳೂರಿನಲ್ಲಿ ಇವೆ. ಕೊಳೆಗೇರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ 3,682 ಕೋಟಿ ಹಣ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಈ ಬಗ್ಗೆ ಕೇಂದ್ರ ವಸತಿ ಹಾಗೂ ಕೊಳೆಗೇರಿ ಮಂಡಳಿ ಸಚಿವರ ಗಮನ ಸೆಳೆಯಲು ಕೂಡ ಸಭೆಯಲ್ಲಿ ನಿರ್ಧರಿಸಲಾಯಿತು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 45,124 ಮನೆ ನಿರ್ಮಿಸುವ ಗುರಿಯಿದ್ದು, ಇದರಲ್ಲಿ 8287 ಮನೆಗಳ ನಿರ್ಮಾಣ ಮುಗಿದಿದೆ. ಇನ್ನು, 31,626 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಈ ಯೋಜನೆಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಸಂಪರ್ಕ ವಿದ್ಯುತ್ ಸಂಪರ್ಕ, ಒಳಚರಂಡಿ ಹಾಗೂ ಎಸ್.ಟಿ.ಪಿ. ಒದಗಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ನಿರ್ಮಾಣಗೊಂಡಿರುವ ಮನೆಗಳಿಗೆ ಫಲಾನುಭವಿಗಳು ಹೋಗುತ್ತಿಲ್ಲ ಎಂಬ ಬಗ್ಗೆ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಯೋಜನೆಗಳ ಚರ್ಚೆ ವೇಳೆ ಗಮನಕ್ಕೆ ತರಲಾಯಿತು.

ಈ ಯೋಜನೆಗೆ ವಿಶೇಷವಾಗಿ ಈ ಮೇಲ್ಕಂಡ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರ ರೂ. 660 ಕೋಟಿ ಹಣ ಬಿಡುಗಡೆ ಮಾಡಬೇಕೆಂದು ದೆಹಲಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವಂತೆ ಗಮನಹರಿಸಬೇಕಿದೆ ಎಂದು ಸಭೆ ಅಭಿಪ್ರಾಯಪಟ್ಟಿತು.

ರಾಜ್ಯದೆಲ್ಲೆಡೆ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ ಜಿಲ್ಲಾ ಹಾಗೂ ತಾಲ್ಲೂಕುವಾರು 171 ಹೊಸ ಪ್ರಸ್ತಾವನೆಗಳನ್ನ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕಾಗಿ 60: 40 ಹಂಚಿಕೆ ಸೂತ್ರದಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಅಲ್ಪಸಂಖ್ಯಾತರ ಕಾಲೊನಿಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಇದೆ ವೇಳೆ ಜಮೀರ್ ಅವರು ತಿಳಿಸಿದರು.

ಕೇಂದ್ರ ನಗರಾಭಿವೃದ್ಧಿ, ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತಾವನೆಗಳಿಗೆ ಅನುಮತಿ ದೊರಕಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮ ವಹಿಸುವುದಾಗಿ ಜಯಚಂದ್ರ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: #18%GST for House ConstructionBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Narendra Modiಪ್ರಧಾನಮಂತ್ರಿ ನರೇಂದ್ರ ಮೋದಿಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏರ್ ಟ್ರಾಫಿಕ್ ಕಂಟ್ರೋಲರ್ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ದುರಂತ

Next Post

ಜ.2, 3ರಂದು ಎನ್‌ಇಎಸ್ ಬಿಎಡ್‌ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರಸಂಕಿರಣ

kalpa News

kalpa News

Next Post
ಎ.9ರಂದು ಎನ್ಇಎಸ್ ನೌಕರರಿಗೆ ‘ಅಮೃತ ಕ್ರೀಡೋತ್ಸವ’

ಜ.2, 3ರಂದು ಎನ್‌ಇಎಸ್ ಬಿಎಡ್‌ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರಸಂಕಿರಣ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL