ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ Soumya Reddy ಅವರಿಗೆ ಸೇರಿದ ಕಾರಿನಲ್ಲಿ 20 ಸೀರೆ, 2 ಪಂಚೆ, 14 ಶಾಲುಗಳು, 14 ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಜಯನಗರದ ವಾಜಪೇಯಿ ಬಸ್ ನಿಲ್ದಾಣದ ಬಳಿ ವಾಹನಗಳ ತಪಾಸಣೆ ಮಾಡುವಾಗ ಸೌಮ್ಯಾ ರೆಡ್ಡಿ ಅವರ ಇನೋವಾ ಕಾರು ಅಲ್ಲಿಗೆ ಬಂದಿದೆ. ಈ ವೇಳೆ ತಪಾಸಣೆ ಮಾಡಿದಾಗ 20 ಸೀರೆಗಳು, 2 ಪಂಚೆಗಳು, 13 ಶಾಲುಗಳು, 14 ಮೊಬೈಲ್’ಗಳು, ಪ್ಲಾಸ್ಟಿಕ್ ಹಾರಗಳು, ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್ಲೆಟ್’ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ವಿಚಕ್ಷಣ ದಳದ ಅಧಿಕಾರಿಗಳು ಕಾರನ್ನು ಜಪ್ತಿ ಮಾಡಿದ್ದಾರೆ.
ಕಾರು ತಪಾಸಣೆ ವೇಳೆ ಶಾಸಕಿ ಸೌಮ್ಯಾ ರೆಡ್ಡಿ ಅವರು ಕಾರಿನಲ್ಲಿ ಇರಲಿಲ್ಲ ಎಂದು ತಿಳಿದುಬಂದಿದ್ದು, ಚಾಲಕ ರಾಮಚಂದ್ರ ಅವರು ಕಾರಿನಲ್ಲಿ ತೆರಳುವಾಗ ವಿಚಕ್ಷಣ ದಳದ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಜಪ್ತಿ ಮಾಡಿದ ಕಾರನ್ನು ತಿಲಕನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.
Also read: ನೀತಿ ಸಂಹಿತೆ ಉಲ್ಲಂಘನೆ ಕಾರ್ಯಾಚರಣೆ: ಬರೋಬ್ಬರಿ 4 ಕೋಟಿ ರೂ.ಗೂ ಅಧಿಕ ಹಣ ಜಪ್ತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post