No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ: ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2022
in ಬೆಂಗಳೂರು ನಗರ, ರಾಜಕೀಯ
0
ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ: ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು Ramesh Babu ಅವರು ಆರೋಪಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳ ಮಟ್ಟದಲ್ಲಿ 254 ಕೋಟಿ ಮೊತ್ತದ ಹಗರಣ ಮಾಡಲು ಮುಂದಾಗಿದ್ದು, ಈ ಕುರಿತು ಮೇ 5 ಹಾಗೂ 7 ರಂದು ವಿಧಾನಸಭೆ ಸ್ಪೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ನಂತರ ಸ್ಪೀಕರ್ ಅರನ್ನು ಭೇಟಿ ಮಾಡಿಯೂ ಈ ವಿಚಾರವಾಗಿ ಮನವಿ ಮಾಡಿದ್ದೇನೆ ಎಂದರು.

ಸ್ಪೀಕರ್ ಆದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಮುಖ್ಯಸ್ಥರಾಗಿ ಸದನದ ಹಣವನ್ನು ಕಾಪಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾರ್ವಜನಿಕರ ವಿರೋಧದ ನಡುವೆಯೂ ಅಧಿಕಾರಿಗಳು ವಿಧಾನಸಭೆಯ ಸಚಿವಾಲಯಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನು ತರುವ ಜವಾಬ್ದಾರಿಯನ್ನು ಕಿಯೋನಿಕ್ಸ್ ಎಂಬ ಖಾಸಗಿ ಕಂಪನಿಗೆ ನೀಡುವ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
2017-18ರಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಆಯವ್ಯಯದಲ್ಲಿ ಕರ್ನಾಟಕ ವಿಧಾನಮಂಡಲದಲ್ಲಿ ನಗದು ರಹಿತ ಯೋಜನೆಯ ಇ-ವಿಧಾನ ಕಾರ್ಯಕ್ರಮ ಜಾರಿಗೊಳಿಸಲು ಪ್ರಾಥಮಿಕವಾಗಿ ಮೂಲಭೂತ ಸೌಕರ್ಯಗಳಿಗೆ 20 ಕೋಟಿ ರೂಪಾಯಿಗಳ ಬಿಡುಗಡೆ ಮತ್ತು ಈ ಯೋಜನೆಗೆ 250 ಕೋಟಿಗಳ ಅನುದಾನ ಘೋಷಣೆ ಮಾಡಿತ್ತು. ನಂತರ ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ವಿಧ ಎಂಬ ಉದ್ದೇಶದಿಂದ ಎಲ್ಲ ಕಡೆ ಒಂದೇ ರೀತಿಯ ಆಡಳಿತಾತ್ಮಕ ವ್ಯವಸ್ಥೆ ಜಾರಿಗೆ ಅಂದರೆ ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಕ ಮೇವಾ ಎಂಬ ಯೋಜನೆ ಘೋಷಿಸಿದ್ದರು. ಯಾವ ರಾಜ್ಯಗಳ ಕಾಗದ ರಹಿತ ವ್ಯವಸ್ಥೆ ಜಾರಿಗೆ ಮುಂದೆಬರುತ್ತವೋ ಆ ರಾಜ್ಯಗಳಿಗೆ 60:40 ಅನುದಾನದ ನೀಡಲು ತೀರ್ಮಾನಿಸಲಾಗಿತ್ತು. ಅದಕ್ಕೆ ಅನುಗುಣವಾಗಿ 2018ರಲ್ಲಿ ಆಗಿನ ಮುಖ್ಯಕಾರ್ಯದರ್ಶಿಗಳು ವಿಜಯ್ ಭಾಸ್ಕರ್ ಅವರು ಕೇಂದ್ರಕ್ಕೆ ಪತ್ರ ಬರೆದು ಈ ಯೋಜನೆ ಜಾರಿಗೆ ಆಸಕ್ತಿ ಇದ್ದು ಇದರ ಡಿಪಿಆರ್ ಕಳುಹಿಸಿ, ಕೇಂದ್ರದ ಶೇ.60ರಷ್ಟು ಅನುದಾನ ಬಳಸಿಕೊಳ್ಳುವುದಾಗಿ ತಿಳಿಸಲಾಗುತ್ತದೆ. ನಂತರ ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರ ಬರೆದು ಈ ಯೋಜನೆಯ ಕಾರ್ಯಾಗಾರ ಏರ್ಪಡಿಸಲಾಗಿದ್ದು, ನಿಮ್ಮ ಸಚಿವಾಲಯದ ಅಧಿಕಾರಿಗಳನ್ನು ಕಳುಹಿಸಿಕೊಡಿ ಎಂದು ತಿಳಿಸಲಾಗುತ್ತದೆ.

Also read: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಇದಕ್ಕೆ ಅನುಗಣವಾಗಿ ಉಭಯ ಸದನಗಳ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಗಿಸುತ್ತಾರೆ. ನಂತರ ಹಲವು ವಿಚಾರ ಸಂಕೀರಣ ನಡೆದಿದ್ದು, ಕಾಗೇರಿ ಅವರು ಇದರಲ್ಲಿ ಭಾಗಿಯಾಗಿದ್ದಾರೆ. ಆಗ ಪರಿಷತ್ ಸಭಾಧ್ಯಕ್ಷರಾಗಿದ್ದ ಹೊರಟ್ಟಿ ಅವರು ಭಾಗವಹಿಸಿದ್ದರು. ಈ ಸಮ್ಮೇಳನದ ನಂತರ ಸ್ಪೀಕರ್ ಅವರು ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಮೇವಾ ಯೋಜನೆ ಜಾರಿ ಹಾಗೂ ಅದರ ನಿರ್ವಹಣೆ ಮಾಡಲು ಉನ್ನತ ಮಟ್ಟದ ಸಮಿತಿ ಮಾಡಿತ್ತು.

08-05-2018ರಲ್ಲಿ ವಿಧಾನಮಂಡಲದ ಸಚಿವಾಲಯದ ಅಧಿಕಾರಿಗಳು ಹಿಮಾಚಲ ಪ್ರದೇಶದ ವಿಧಾನಸಭಾ ಸಚಿವಾಲಯಕ್ಕೆ ಭೇಟಿ ನೀಡಿ ಅಲ್ಲಿನ ಕಾಗದ ರಹಿತ ಆಡಳಿತದ ಅಧ್ಯಯನ ಮಾಡಿ, ಯೋಜನೆ ಮತ್ತು ಇದರ ತಂಡಜ್ಞಾನ ಸಂಬಂಧ ಸಭಾಧ್ಯಕ್ಷರಿಗೆ ವರದಿ ಸಲ್ಲಿಕೆ ಮಾಡಲಾಗಿತ್ತು ಎಂದರು.
254 ಕೋಟಿ ರೂ. ಮೊತ್ತದ ಯೋಜನೆಗೆ ಸುಮಾರು 152 ಕೋಟಿ ರೂ. ಕೇಂದ್ರದಿಂದ ಅನುದಾನ ಬರುತ್ತಿತ್ತು. ರಾಜ್ಯ ಸರ್ಕಾರ ಕೇವಲ 101 ಕೋಟಿ ಮಾತ್ರ ನೀಡಬೇಕಾಗಿತ್ತು. ಆದರೆ ಈ ಮೇವಾ ಯೋಜನೆ ಜಾರಿ ಮಾಡಿದರೆ ಅಧಿಕಾರಿಗಳ ಜೇಬು ತುಂಬುವುದಿಲ್ಲ ಎಂಬ ಉದ್ದೇಶದಿಂದ ವಿಧಾನಸಭೆ ಸ್ಪೀಕರ್ ಪರಿಷತ್ತಿನ ಸಭಾಪತಿಗಳ ದಾರಿ ತಪ್ಪಿಸಿ ಇದನ್ನು ಖಾಸಗಿಯವರಿಗೆ ನೀಡಲು ಮುಂದಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಅಧಿಕಾರಿಗಳಿಂದ ಈ ಯೋಜನೆ ಜಾರಿ ಕುರಿತು ಕಿಯೋನಿಕ್ಸ್‌ ಸಂಸ್ಥೆಗೆ ಪತ್ರ ಬರೆಯಲಾಗುತ್ತದೆ. ನಂತರ ಕಂಪನಿಯು ಈ ಯೋಜನೆ ನಾವೆ ಮಾಡುತ್ತೇವೆ. ಕೇರಳ ಮೂಲಕ ಕಂಪನಿಗಳ ಮೂಲಕ ಮಾಡುವುದಾಗಿ ಎಂದು ಪತ್ರ ಬರೆಯುತ್ತಾರೆ. ಆಗ ಆರ್ಥಿಕ ಇಲಾಖೆಗೆ ಪತ್ರ ಬರೆದು 254 ಕೋಟಿ ಹಣ ಬಿಡುಗಡೆ ಮಾಡುವಂತೆ ಕೋರಲಾಗುತ್ತದೆ.

ಇದರಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು 19-12-2020ರಲ್ಲಿ ಕಿಯೋನಿಕ್ಸ್‌ ವರದಿಯ ಯೋಜನೆಗೆ ಹಣ ಬಿಡುಗಡೆ ಮಾಡದಂತೆ ಸರ್ಕಾರದ ಆರ್ಥಿಕ ಇಲಾಖೆಗೆ ಪತ್ರ ಬರೆಯುತ್ತಾರೆ.
ನಂತರ ಈ ಯೋಜನೆ ಫೈಲ್ ಅನ್ನು ಹಾಗೇ ಇಡುತ್ತಾರೆ. ನಂತರ ಮುಖ್ಯಕಾರ್ಯದರ್ಶಿಗಳ ನೇತೃತ್ವದ ಸಮಿತಿ ತನ್ನ ವರದಿ ನೀಡಿ ಕೇಂದ್ರ ಸರ್ಕಾರದ ಯೋಜನೆ ಉತ್ತಮವಾಗಿದೆ ಎಂದು ತಿಳಿಸಿತ್ತು. ಆದರೆ ಇತ್ತೀಚೆಗೆ 18-02-2021ರಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳು ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದು ಕಾಗದ ರಹಿತ ಯೋಜನೆಗೆ ಪತ್ಯೇಕವಾಗಿ ಅನುದಾನ ಬಿಡುಗಡೆಗೆ ಒತ್ತಾಯ ಮಾಡಲಾಗಿದೆ.

ಹೀಗಾಗಿ ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದು ಸಾರ್ವಜನಿಕ ಹಿತದೃಷ್ಟಿಯಿಂದ 254 ಕೋಟಿಯ ಯೋಜನೆಯನ್ನು ಖಾಸಗಿಯವರಿಗೆ ನೀಡದಂತೆ ಮನವಿ ಮಾಡಲಾಗಿದೆ. ಸ್ಪೀಕರ್ ಅವರು ಅಧಿಕಾರಿಗಳ ತಪ್ಪು ಮಾಹಿತಿಯಿಂದ ದಾರಿ ತಪ್ಪಬಾರದು, ಕೇಂದ್ರದ ಮೇವಾ ಯೋಜನೆ ಜಾರಿ ಮಾಡಲಿ. ಸಾರ್ವಜನಿಕರ ಹಣ ಸಂರಕ್ಷಣೆಗೆ ಮುಂದಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಸ್ಪೀಕರ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಈ ವಿಚಾರವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು.

ವಿಧಾನಸಭೆಯಲ್ಲೇ ಈ ರೀತಿ ಹಗರಣ ನಡೆದರೆ ಬೇರೆ ಸಚಿವಾಲಯಗಳ ಪರಿಸ್ಥಿತಿ ಏನು? ಮೇವಾ ನಿಮ್ಮದೇ ಸರ್ಕಾರದ ಯೋಜನೆಯಾಗಿದ್ದು, ಅದನ್ನು ಬಳಸಿಕೊಳ್ಳಬೇಕು. ಖಾಸಗಿಯವರಿಗೆ ಅವಕಾಶ ನೀಡಬಾರದು.
ರಾಜೀವ್ ಚಂದ್ರಶೇಖರ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಸಚಿವಾಲಯದ ಹಾಗೂ ಪ್ರಹ್ಲಾದ್ ಜೋಷಿ ಅವರ ಬಳಿ ಇರುವ ಸಂಸದೀಯ ವ್ಯವಹಾರಗಳ ಸಮಿತಿ ಅಡಿಯಲ್ಲಿ ಈ ಯೋಜನೆ ಬರಲಿದ್ದು, ರಾಜ್ಯ ಸರ್ಕಾರ ಮೇವಾ ಯೋಜನೆ ಜಾರಿಗೆ ಮುಂದಾದರೆ ಕೇಂದ್ರದಿಂದ ಬೇಗ ಅನುದಾನ ಪಡೆಯಬಹುದು.’

ಸ್ಪೀಕರ್ ಗಮನಕ್ಕೆ ಈ ವಿಚಾರ ಬಂದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದ ಬಗ್ಗೆ ತಮಗೆ ಮಾಹಿತಿ ಇದೆಯೋ ಇಲ್ಲವೋ ಎಂದು ಸ್ಪೀಕರ್ ಅವರೇ ಹೇಳಬೇಕು. ಅವರ ಮೂಗಿನ ಕೆಳಗೆ ಇಷ್ಟು ದೊಡ್ಡ ಹಗರಣ ನಡೆಯುತ್ತಿದೆ. ಅವರ ಸಂವಿಧಾನತ್ಮಕ ಹುದ್ದೆಗೆ ಗೌರವ ನೀಡುತ್ತಾ ನಾವು ಅವರ ಮೇಲೆ ಆರೋಪ ಮಾಡುತ್ತಿಲ್ಲ. ಅವರು ಸಾರ್ವಜನಿಕ ಹಣವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಹೊತ್ತಿದ್ದು, ಈ ಕಾರಣಕ್ಕೆ ಈ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

ಇನ್ನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿಯ ಅನೇಕ ನಾಯಕರಲ್ಲಿ ಸಿ.ಟಿ ರವಿ ಅವರು ಮಾತ್ರ ಕುಡಿದು ಓಡಾಡುತ್ತಾರೆ ಎಂದು ಭಾವಿಸಿದ್ದೆವು. ಬೇರೆ ನಾಯಕರು ಕುಡಿದು ಓಡಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಕತ್ತಿ ಅರು ಎರಡು ದಿನಗಳ ಹಿಂದೆ 20224ರ ಚುನಾವಣೆ ನಂತರ ಕರ್ನಾಟಕ ಇಬ್ಬಾಗವಾಗಲಿದೆ ಎಂದು ಹೇಳಿದ್ದಾರೆ. ಇಂತರ ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಅಸ್ಥಿತ್ವ ಉಳಿಸಿಕೊಳ್ಳಲು ಮಾಡುವ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕತ್ತಿ ಅವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ನಿಮಗೆ ಕುಡಿಯುವ ಚಟ ಇದ್ದರೆ ನಿಮ್ಮ ಮನೆಯಲ್ಲಿ ಕುಡಿದು ಮಾತನಾಡಿ. ಸಾರ್ವಜನಿಕವಾಗಿ ಇಂತಹ ಹೇಳಿಕೆ ಕೊಟ್ಟು ಜನರ ಮನಸ್ಸು ಒಡೆಯುವ ಕೆಲಸ ಮಾಡಬೇಡಿ. 1973ರಲ್ಲಿ ಅಖಂಡ ಕರ್ನಾಟಕ ರಚನೆಯಾದ ಬಳಿಕ ಎಲ್ಲ ಕನ್ನಡಿಗರು ಒಟ್ಟಾಗಿದ್ದೇವೆ. ಈ ರೀತಿ ಹೇಳಿಕೆಯಿಂದ ವಿಷಬೀಜ ಬಿತ್ತುವ ಕೆಲಸ ಮಾಡಬಾರದು’ ಎಂದು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsRamesh Babuಬೆಂಗಳೂರುರಮೇಶ್ ಬಾಬು
Share197Tweet123Send
Previous Post

ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

Next Post

ತೀರ್ಥ ಸೇವನೆ ವೇಳೆ ಬಾಲಕೃಷ್ಣನ ಲೋಹದ ಮೂರ್ತಿ ನುಂಗಿದ ವ್ಯಕ್ತಿ! ಮುಂದೇನಾಯ್ತು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥ ಸೇವನೆ ವೇಳೆ ಬಾಲಕೃಷ್ಣನ ಲೋಹದ ಮೂರ್ತಿ ನುಂಗಿದ ವ್ಯಕ್ತಿ! ಮುಂದೇನಾಯ್ತು? ಇಲ್ಲಿದೆ ಮಾಹಿತಿ

ತೀರ್ಥ ಸೇವನೆ ವೇಳೆ ಬಾಲಕೃಷ್ಣನ ಲೋಹದ ಮೂರ್ತಿ ನುಂಗಿದ ವ್ಯಕ್ತಿ! ಮುಂದೇನಾಯ್ತು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

May 23, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL