No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗುತ್ತಿಗೆದಾರರಿಗೆ ಎಲ್‌ಒಸಿ ಕೊಡಲು 5% ಫಿಕ್ಸ್! ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2023
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ನೇರ ಆರೋಪ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರದಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಅಧಿಕಾರಿಗಳ ಸಭೆ ನಡೆದಿದೆ. ಆ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ನನಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ. ನಾವು ಹೇಳಿದಂತೆ ಮಾತ್ರ ಕೇಳಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ಏನೆಂದರೆ, ನಮಗೆ ಬೇಕಾದ ಹಾಗೆ ಕೆಲಸ ಮಾಡಿ, ಇಲ್ಲವೇ ಹೊರಡಿ ಎನ್ನುವುದೇ ಈ ಫರ್ಮಾನಿನ ಒಳಾರ್ಥ ಎಂದು ಕುಮಾರಸ್ವಾಮಿ ಅವರು ದೂರಿದರು.

http://kalpa.news/wp-content/uploads/2023/05/Jain-Public-School.mp4

 

ಪ್ರಾರಂಭಿಕ ಹಂತದಲ್ಲಿ ಕಾಂಗ್ರೆಸ್ ಸರಕಾರ ಕೆಲವು ನಿರ್ಧಾರ ತೆಗೆದುಕೊಂಡಿದೆ. ಹಿಂದಿನ ಟೆಂಡರ್ ಗಳು ಸೇರಿದಂತೆ ಅನೇಕ ಕಡೆ ಅನುದಾನ ತಡೆ ಹಿಡಿಯಲಾಗಿದೆ. ಬಿಜೆಪಿ ಸರಕಾರ 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿತ್ತು. ಕಳೆದ ಮೇ 6ರಂದು 675 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಿಗೆ ಎಲ್ ಒಸಿ ರಿಲೀಸ್ ಆಯಿತು. ಆ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಎಂಪಿ ಹೇಳಿದ್ದರಂತೆ, ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬೇಡಿ, ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿದ್ದರಂತೆ ಅವರು. ಅವರು ಯಾಕೆ ಹೇಳಿದ್ದರು? ಯಾರು ಆ ಎಂಪಿ ಯಾರು? ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನಿಸಿದರು.

675 ಕೋಟಿ ಮೊತ್ತದ ಎಲ್ ಒಸಿ ಹಣ ಯಾಕೆ ಬಿಡುಗಡೆ ಆಗಲಿಲ್ಲ ಎನ್ನುವುದು ಅನುಮಾನಕ್ಕೆ ಕಾರಣ. ಈಗ LOC ಬಿಡುಗಡೆ ಆಗಬೇಕು ಅಂದರೆ 5 ಪರ್ಸೆಂಟ್ ಕೊಡಲೇಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. 40 ಪರ್ಸೆಂಟ್ ಜತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರಂತೆ. ಅಲ್ಲಿಗೆ ಇದು 45 ಪರ್ಸೆಂಟ್ ಸರಕಾರ ಎಂದಾಯಿತಲ್ವೆ? ಆಗಿರುವ ಕಾಮಗಾರಿಗಳಿಗೆ ಪರ್ಸಂಟೇಜ್ ಕೇಳುತ್ತಿದ್ದಾರೆ, ಇವರು ಸತ್ಯ ಹರಿಶ್ಚಂದ್ರರು ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್
ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು.

Also read: ಜನರ ಸಂಕಷ್ಟ ತಗ್ಗಿಸುವುದೇ ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಧ್ಯಮಗಳ ಜತೆ ಮಾತನಾಡಿದಾಗ ಎದುರಾದ ಪ್ರಶ್ನೆಗೆ ಉತ್ತರ ನೀಡಿದ ಅವರು, ವಿದೇಶಿ ಪ್ರವಾಸದಲ್ಲಿರುವ ಆ ಸಚಿವರು ಯಾರು? ಆ ಸಚಿವರ ಗಮನಕ್ಕೆ ಬಾರದೆಯೇ ಅವರ ಇಲಾಖೆಗೆ ಪೋಸ್ಟಿಂಗ್ ಅದ ಆ ಅಧಿಕಾರಿ ಯಾರು? ಎನ್ನುವುದನ್ನು ಬಹಿರಂಗ ಮಾಡಲಿ. ಮೊದಲು ಇವರು ನನ್ನ ಬಗ್ಗೆ ಬಗ್ಗೆ ಲಘುವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದರು.

http://kalpa.news/wp-content/uploads/2023/05/VID-20230516-WA0005-1.mp4

 

ಸಿಎಂ ಅವರೇ ಆ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಅದಕ್ಕೆ ಸಂಬಂಧಪಟ್ಟ ಮಂತ್ರಿ ವಿದೇಶದಲ್ಲಿ ಇದ್ದಾರೆ. ಸಿಎಂ ಆದೇಶ ಮಾಡಿದ್ದರೂ, ನಾನು ಬರುವವರೆಗೂ ಅಧಿಕಾರ ತೆಗೆದುಕೊಳ್ಳಬೇಡಿ ಅಂತ ತಾಕೀತು ಮಾಡಿದ್ದಾರಂತೆ. ಹಾಗಾದರೆ ಎಷ್ಟು ಹಣ ಕೊಟ್ಟು ಬಂದರು ಈ ಅಧಿಕಾರಿ? ಈಗ ‘ವರ್ಗಾವಣೆ ಜ್ಯೋತಿ’ ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳ್ತಾರೆ ಇವರು. ಎಸಿಬಿ ದಾಳಿಗೆ ಒಳಗಾಗಿದ್ದ ಇನ್ನೊಬ್ಬ ಅಧಿಕಾರಿಯನ್ನು ಸಿಎಂ ಕಚೇರಿಯಲ್ಲಿಯೇ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ವಾಗ್ದಾಳಿ ನಡೆಸಿದರು.

ಬಿಜೆಪಿ ಸರಕಾರದ ಬಗ್ಗೆ 40 ಪರ್ಸೆಂಟ್ ಬಗ್ಗೆ ಮಾತಾಡಿದ್ದರು ಇವರು. ಹಾದಿಬೀದಿಯಲ್ಲಿ ಜಾಗಟೆ ಹೊಡೆದುಕೊಂಡು ಪ್ರಚಾರ ಮಾಡಿದರು. ಈಗ ನೋಡಿದರ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ಶುರು ಮಾಡಿಕೊಂಡಿದ್ದಾರೆ. 40 ಪರ್ಸೆಂಟ್ ಎಂದು ಪುಂಗಿ ಬಿಟ್ಟ ಇವರು ಆ ಆರೋಪವನ್ನು ಸಾಬೀತು ಮಾಡಿದ್ರ? ಎಂದು ಅವರು ಪ್ರಶ್ನಿಸಿದರು.
ರಾಜಕೀಯ ನಿವೃತ್ತಿಯ ಸವಾಲು:
ನಾನು ಮುಖ್ಯಮಂತ್ರಿ ಆಗಿದ್ದಾಗ ಹಣ ಪಡೆದು ಪೋಸ್ತಿಗ್ ಮಾಡಿದ್ದೆ ಎನ್ನುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಹೊಂದುತ್ತೆನೆ ಎಂದ ಅವರು; ಈಗ ಅಧಿಕಾರಿಗಳ ಪೋಸ್ಟಿಂಗ್ ಗೆ ಯಾರು? ಎಲ್ಲಿ ಕೂತು ರೇಟ್ ಫಿಕ್ಸ್ ಮಾಡುತ್ತಿದ್ದಾರೆ? ಎನ್ನುವುದನ್ನು ಅಧಿಕಾರಿಗಳೇ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಹಾರ ನಡೆಸಿದರು.

ಕಾಂಗ್ರೆಸ್ ಜತೆ ನಾನು ಸರ್ಕಾರ ಮಾಡಿದ್ದಾಗ ಕಾಂಗ್ರೆಸ್ ನವರು ಹೇಳಿದ ಮೇಲೆ ವರ್ಗಾವಣೆ ಮಾಡಬೇಕು ಎನ್ನುವ ಪರಿಸ್ಥಿತಿ ಇತ್ತು. 2018ರಲ್ಲಿ ಸಿಎಂ ಆಗಿದ್ದಾಗ ಅಮೆರಿಕಕ್ಕೆ ಹೋಗಿದ್ದೆ. ಆಗ ಶಾಸಕ ಭೈರತಿ ಬಸವರಾಜ್ ಮುನಿಸಿಕೊಂಡು ಬಿಜೆಪಿಗೆ ಹೋದರು. ನನ್ನ ಸಂಪುಟದಲ್ಲಿ ಸಚಿವರಾಗಿದ್ದ ಕಾಂಗ್ರೆಸ್ ನಾಯಕರೊಬ್ಬರು ಸೋಪ್ ಅಂಡ್ ಡಿಟರ್ಜಂಟ್ ಕಾರ್ಖಾನೆಗೆ ಅಧಿಕಾರಿ ಒಬ್ಬರನ್ನು ವರ್ಗ ಮಾಡುವ ವಿಷಯದಲ್ಲಿ ನಡೆದ ಗಲಾಟೆ ನನ್ನ ಸರಕಾರವನ್ನು ಬಲಿ ತೆಗೆದುಕೊಂಡಿತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: BangaloreHDKumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನರ ಸಂಕಷ್ಟ ತಗ್ಗಿಸುವುದೇ ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಎಲ್ಲರೂ ವಿದ್ಯೆ ಕಲಿಯಬೇಕು ಅದು ಮಕ್ಕಳ ಮೂಲಭೂತ ಹಕ್ಕು: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲರೂ ವಿದ್ಯೆ ಕಲಿಯಬೇಕು ಅದು ಮಕ್ಕಳ ಮೂಲಭೂತ ಹಕ್ಕು: ಸಿಎಂ ಸಿದ್ದರಾಮಯ್ಯ

ಎಲ್ಲರೂ ವಿದ್ಯೆ ಕಲಿಯಬೇಕು ಅದು ಮಕ್ಕಳ ಮೂಲಭೂತ ಹಕ್ಕು: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL