ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಹಾಗೂ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಹಿನ್ನೆಲೆ ರಾಯಚೂರಿನಲ್ಲಿ ಇಂದು ಬಂದ್‍ಗೆ ಕರೆ ಕೊಡಲಾಗಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕಲುಷಿತ ನೀರಿನ ಹಿನ್ನೆಲೆ ಡಿಸಿಗೆ ರಾಯಚೂರಿನ ಎಲ್ಲ ವಾರ್ಡ್‍ಗಳ ನೀರು ಪರಿಶೀಲಿಸಲು ಸೂಚಿಸಿದ್ದೇನೆ ಎಂದರು.
Also read: ಉಡುಪಿ: ಹಿಜಾಬ್ ವಿವಾದದ ಬೆನ್ನಲ್ಲೇ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ದಾಖಲಾತಿ ಹೆಚ್ಚಳ!
ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದು, ಅಧಿಕಾರಿಗಳು ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post