ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಸರ್ಕಾರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ 50 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಇನ್ನು ಆಕ್ಷೇಪಾರ್ಹ ಪೋಸ್ಟ್ ತೆಗೆಯಲು ಕೇಂದ್ರ ಸರ್ಕಾರ ನೀಡಿದ್ದ ಸೂಚನೆಯನ್ನು ಪ್ರಶ್ನಿಸಿ ಟ್ವಿಟ್ಟರ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಕೇಂದ್ರ ಸರ್ಕಾರದ ನೋಟಿಸ್ನ್ನು ಟ್ವಿಟರ್ ಸಂಸ್ಥೆ ಪಾಲಿಸಿಲ್ಲ1 ವರ್ಷ ವಿಳಂಬದ ನಂತರ ಸೂಚನೆ ಪಾಲಿಸಿ ಕೋರ್ಟ್ಗೆ ಬಂದಿದ್ದೀರಿ ಎಂದು ಕೃಷ್ಣ ಎಸ್. ದೀಕ್ಷಿತ್ ಟ್ವಿಟರ್ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದಂಡದ ಮೊತ್ತವನ್ನು45 ದಿನಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ತಡವಾದರೆ ಪ್ರತಿದಿನ 5 ಸಾವಿರ ದಂಡ ವಿಧಿಸಬೇಕಾಗುತ್ತದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಎಚ್ಚರಿಕೆ ನೀಡಿದ್ದಾರೆ.
Also read: ಮಹಿಳೆಯ ಹತ್ಯೆಗೈದು ಲಕ್ಷಾಂತರ ರೂ. ದೋಚಿದ್ದ ಆರೋಪಿಗಳು ಪೊಲೀಸ್ ವಶಕ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post