ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 16ರ ಭಾನುವಾರ ಒಂದೇ ದಿನ ರಾಜ್ಯದಾದ್ಯಂತ ವಿವಿಧ ಅಪಘಾತಗಳಿಗೆ 51 ಮಂದಿ ಬಲಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ #ADGP Alok Kumar ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾನುವಾರ 24 ಗಂಟೆಗಳ ಅವಧಿಯಲ್ಲಿ ರಾಜ್ಯದಾದ್ಯಂತ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಸಾವಿಗೀಡಾಗಿದ್ದಾರೆ ಎಂದಿದ್ದಾರೆ.
ಇಂತಹ ದುರ್ಘಟನೆಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಸಾರ್ವಜನಿಕರಿಗೆ ಅವರು ಮನವಿ ಮಾಡಿದ್ದಾರೆ.
Also read: ಕೇದಾರನಾಥಕ್ಕೆ ಹೆಚ್ಚಿದ ಭಕ್ತರ ಸಂಖ್ಯೆ | ದಾರಿ ಮಧ್ಯೆಯೇ ಸಿಲುಕಿದ ಜನ | ಸದ್ಯಕ್ಕೆ ಹೋಗಬೇಡಿ
ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭೀಕರ ಅಪಘಾತಗಳು ನಡೆದಿದ್ದವು. ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎಂದು ಆರೋಪಿಸಲಾಗಿತ್ತು. ಇಂತಹ ಘಟನೆಗಳಿಗೆ ಅತಿವೇಗ ಹಾಗೂ ಅಜಾಗರೂಕತೆ ಚಾಲನೆಯೇ ಕಾರಣವಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post