No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೇವಸ್ಥಾನಗಳ ಅಭಿವೃದ್ದಿಗೆ 693 ಕೋಟಿ ರೂ. ಅನುದಾನ: ಸಚಿವೆ ಶಶಿಕಲಾ ಜೊಲ್ಲೆ ಸಂತಸ

kalpa News by kalpa News
July 12, 2022
in ಬೆಂಗಳೂರು ನಗರ
0
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |      

ರಾಜ್ಯದ ದೇವಸ್ಥಾನಗಳ ಅಭಿವೃದ್ದಿಗೆ ಕಳೆದ 10 ವರ್ಷಗಳಲ್ಲೇ ಅತಿಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯಗಳ ಸಮಗ್ರ ಅಭಿವೃದ್ದಿಯ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಜರಾಯಿ ಇಲಾಖೆಗೆ ಬಲ ತುಂಬಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ Minister Shashikala Jolle ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 2022 – 23 ರ ಆಯವ್ಯಯದಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ರಾಜ್ಯದ ಹೊರಭಾಗದಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಒಟ್ಟು 421 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ. ಇದರ ಜೊತೆಗೆ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನಸಭಾ ಕ್ಷೇತ್ರವಾರು ದೇವಸ್ಥಾನಗಳ ಜೀರ್ಣೋದ್ದಾರಕ್ಕಾಗಿ ಇದುವರೆವಿಗೂ (ಜುಲೈ 10, 2022 ರವರೆಗೆ) ಒಟ್ಟು 272 ಕೋಟಿ ರೂಪಾಯಿಗಳ ವಿಶೇಷ ಅನುದಾನ ಒದಗಿಸಿದ್ದು, ಅದರಲ್ಲಿ ಶೇ. 50 ರಷ್ಟನ್ನು (136 ಕೋಟಿ ರೂ) ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಇದರಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೂ ಒಟ್ಟು ರೂ. 693 ಕೋಟಿ ಗಳಷ್ಟು (ಬಜೆಟ್‌ ಅನುದಾನ 421 ಕೋಟಿ + ವಿಶೇಷ ಅನುದಾನ ರೂ. 272 ಕೋಟಿ) ಬೃಹತ್‌ ಗಾತ್ರದ ಅನುದಾನ ಒದಗಿಸಲಾಗಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಹಲವಾರು ನೂತನ ಯೋಜನೆಗಳನ್ನ ಘೋಷಣೆ ಮಾಡಿ ಅನುಷ್ಠಾನಗೊಳಿಸಲಾಗುತ್ತಿದೆ. ದೈವ ಸಂಕಲ್ಪ (ರೂ. 1140 ಕೋಟಿ ವೆಚ್ಚದಲ್ಲಿ 25 ಏ ದರ್ಜೆ ದೇವಾಲಯಗಳ ಸಮಗ್ರ ಅಭಿವೃದ್ದಿ), ಇಂಟಿಗ್ರೇಟೆಡ್‌ ಟೆಂಪಲ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ಅಳವಡಿಕೆ, ಕಾಯಕಲ್ಪ (ಮುಜರಾಯಿ ಇಲಾಖೆಯ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ), ಕಾಶಿ ಯಾತ್ರೆಗೆ ಸಹಾಯಧನ, ಕಾಶಿಗೆ ಭಾರತ್‌ ಗೌರವ್‌ ಯೋಜನೆಯ ಮೂಲಕ ರೈಲು, ಇಲಾಖೆಯ ನೌಕರರು ಹಾಗೂ ಅರ್ಚಕರುಗಳಿಗೆ ವಿಮಾ ಸೌಲಭ್ಯ, ತಸ್ತಿಕ್‌ ಹಣ ಹೆಚ್ಚಳದಂತಹ ಯೋಜನೆಗಳಿಗೆ ಮುಖ್ಯಮಂತ್ರಿಗಳು ಅಗತ್ಯ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

Also read: ಭದ್ರಾವತಿ ಎಸ್ ಎಸ್ ಜ್ಯೂವೆಲ್ಲರಿಯಲ್ಲಿ ಕಳ್ಳತನ : ಇಬ್ಬರ ಬಂಧನ

ಕಾಂಗ್ರೆಸ್‌ ಸರಕಾರ ತನ್ನ 5 ವರ್ಷಗಳ ಅಧಿಕಾರದ ಅವಧಿಯಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿರಲಿಲ್ಲ. 5 ವರ್ಷಗಳಲ್ಲಿ ಕೇವಲ 1,289 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದರೆ, ಬಿಜೆಪಿ ಸರಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿದೆ. ಕಾಂಗ್ರೆಸ್‌ ಮತ್ತು ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ನೂತನ ಯೋಜನೆಗಳ ಘೋಷಣೆಯೇ ಆಗಿರಲಿಲ್ಲ ಎನ್ನುವುದನ್ನ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಾಗಿದೆ ಎಂದರು.
ಎಲ್ಲಾ ಪಕ್ಷದವರಿಗೂ ಅನುದಾನ: ಧಾರ್ಮಿಕ ಕೇಂದ್ರಗಳ ಅನುದಾನ ಬಿಡುಗಡೆಯಲ್ಲಿ ಯಾವುದೇ ತಾರತಮ್ಯ ಮಾಡಲಾಗಿಲ್ಲ ಎನ್ನುವುದು ಮತ್ತೊಂದು ವಿಶೇಷ. ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ವಿರೋಧ ಪಕ್ಷದ ಪ್ರಮುಖ ನಾಯಕರು ಹಾಗೂ ಶಾಸಕರುಗಳಿಗೂ ಅನುದಾನ ಹಂಚಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸುವ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ಆಯಾ ಕ್ಷೇತ್ರಗಳ ದೇವಸ್ಥಾನಗಳ ಅಭಿವೃದ್ದಿಗಾಗಿ ಬೇಡಿಕೆ ಸಲ್ಲಿಸಿದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಶಾಸಕರು ಹಾಗೂ ಹಿರಿಯ ನಾಯಕರಿಗೂ ಅನುದಾನ ಹಂಚಿಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಗಳು, ಡಾ. ಯತೀಂದ್ರ ಎಸ್‌ ಅವರ ಕ್ಷೇತ್ರಕ್ಕೆ 1.50 ಕೋಟಿ ರೂಪಾಯಿಗಳು, ಶ್ರೀಮತಿ ಅನಿತಾ ಕುಮಾರಸ್ವಾಮಿ, ಆರ್‌ ವಿ ದೇಶಪಾಂಡೆ ಮತ್ತು ಈಶ್ವರ ಖಂಡ್ರೆ ಅವರ ಕ್ಷೇತ್ರಗಳಿಗೆ ತಲಾ 3 ಮೂರು ಕೋಟಿಗಳ ಅನುದಾನ ಹಂಚಿಕೆಯಾಗಲಿದೆ.

ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಅತ್ಯುತ್ತಮವಾಗಿ ಅಭಿವೃದ್ದಿ ಪಡಿಸಿ ಪ್ರಧಾನಮಂತ್ರಿಗಳ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಸಹಕಾರ ನೀಡಿರುವುದರಿಂದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Shashikala JolleNewsinKannadaNewsKannadaState Newsಬೆಂಗಳೂರುಸಚಿವೆ ಶಶಿಕಲಾ ಜೊಲ್ಲೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಎಸ್ ಎಸ್ ಜ್ಯೂವೆಲ್ಲರಿಯಲ್ಲಿ ಕಳ್ಳತನ : ಇಬ್ಬರ ಬಂಧನ

Next Post

ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

kalpa News

kalpa News

Next Post
ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL