ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬನ್ನೇರುಘಟ್ಟ ಜೈವಿಕ ಉದ್ಯಾನದ Bannerughatta Biological Park 7 ಚಿರತೆ ಮರಿಗಳು ಮಾರಕ ವೈರಸ್‌ನಿಂದಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಕ್ಕಿನಿಂದ ಹರಡುವ ʼಪೆಲಿನ್ ಪ್ಯಾನ್ಲೂಕೋಪೇನಿಯಾʼ ಎಂಬ ಮಾರಕ ವೈರಸ್‌ಗೆ ಚಿರತೆ ಮರಿಗಳು ಬಲಿಯಾಗಿವೆ ಎನ್ನಲಾಗಿದ್ದು, ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಸೆಪ್ಟೆಂಬರ್ 5ರ ವೇಳೆಗೆ ಏಳೂ ಮರಿಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ.
ಬನ್ನೇರುಘಟ್ಟ ಉದ್ಯಾನದಲ್ಲಿ ಇತ್ತೀಚಿಗಷ್ಟೇ ಚಿರತೆ ಸಫಾರಿ ಆರಂಭಿಸಿ ಒಂಬತ್ತು ಚಿರತೆ ಮರಿಗಳನ್ನು ಸಫಾರಿಯಲ್ಲಿ ಬಿಡಲಾಗಿತ್ತು. ಆ ಪೈಕಿ ಸೋಂಕಿನಿಂದ ಮೂರು ಚಿರತೆ ಮರಿಗಳು ಮೃತಪಟ್ಟಿವೆ. ಬಿಳಿಗಿರಿರಂಗನ ಬೆಟ್ಟ, ಮೈಸೂರು ಮೃಗಾಲಯ ಮತ್ತು ಮದ್ದೂರು ಬಳಿ ಗಾಯಗೊಂಡಿದ್ದ ಚಿರತೆ ಮರಿಗಳನ್ನು ರಕ್ಷಿಸಿ, ಬನ್ನೇರುಘಟ್ಟ ಜೈವಿಕ ಉದ್ಯಾನದ ಪುನರ್ವಸತಿ ಕೇಂದ್ರಕ್ಕೆ ತರಲಾಗಿತ್ತು. ಅಲ್ಲಿ ಆರೈಕೆ ಮಾಡಿದ ನಂತರ ಸಫಾರಿಗೆ ಬಿಡಲಾಗಿತ್ತು. ಇನ್ನೂ ಪುನರ್ವಸತಿ ಕೇಂದ್ರದ ಆರೈಕೆಯಲ್ಲಿದ್ದ ನಾಲ್ಕು ಚಿರತೆ ಮರಿಗಳು ಮೃತಪಟ್ಟಿವೆ ಎಂದು ವರದಿಗಳು ತಿಳಿಸಿವೆ.
Also read: ಗುಡ್‌ನ್ಯೂಸ್! ಭೂಮಿಯ 5ನೇ ಕಕ್ಷೆ ಬದಲಿಸಿದ ಆದಿತ್ಯ ಎಲ್-1


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















