ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
12 ವರ್ಷದ ಬಾಲಕಿಯೊಬ್ಬಳು ಅಪಾಟ್ಮೆಂಟ್’ನ 29ನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಗೂರು ಬಡಾವಣೆಯಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಈಕೆ ಇಂದು ನಸುಕಿನಲ್ಲಿ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ಅಪಾರ್ಟ್ಮೆಂಟ್’ನಲ್ಲಿ ತಂದೆ, ತಾಯಿ ಜೊತೆ ವಾಸವಾಗಿದ್ದಳು. ಬಾಲಕಿಯ ತಂದೆ ಸಾಫ್ಟ್ ವೇರ್ ಇಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ.

Also read: ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ | ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ
ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್’ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.
ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post