ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಡು ರಸ್ತೆಯಲ್ಲೇ ಬಿಎಮ್‌ಟಿಸಿ ಬಸ್ ಹೊತ್ತಿ ಉರಿದಿರುವ ಘಟನೆ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ನಡೆದಿದೆ.
ಚಲಿಸುತ್ತಿದ್ದ ಬಿಎಮ್‌ಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ತಕ್ಷಣವೇ ಬಸ್ ನಿಲ್ಲಿಸಿದ ಪರಿಣಾಮ 40 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ದೀಪಾಂಜಲಿ ನಗರ ಡಿಪೋ ನಂಬರ್ 16ರ ಬಸ್ ಇದಾಗಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯನಡೆದಿದೆ. ಡ್ರೈವರ್-ಕಂಡಕ್ಟರ್ ಕೂಡಾ ಬೆಂಕಿ ನಂದಿಸಲು ನೆರವು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post