ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಯತಪ್ಪಿ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಬೆಂಗಳೂರು ವಿವಿ Bangalore VV ಜ್ಞಾನ ಭಾರತಿ ಕ್ಯಾಂಪಸ್’ನಲ್ಲಿ ಘಟನೆ ಇಂದು ಮುಂಜಾನೆ 11 ಗಂಟೆ ವೇಳೆಗೆ ನಡೆದಿದೆ.
ಮೊದಲ ಪಿಜಿ ಓದುತ್ತಿರುವ ಕೋಲಾರ ಮೂಲದ ಶಿಲ್ಪಾ ಎಂಬ ವಿದ್ಯಾರ್ಥಿನಿ ಬಸ್ ಹತ್ತುವಾಗ ಆಯತಪ್ಪಿ ಬಿದ್ದಿದ್ದಾರೆ. ಆದರೆ, ಇದನ್ನು ಗಮನಿಸದ ಚಾಲಕ ಬಸ್ ಚಲಾಯಿಸಿದ್ದು, ಆಕೆಯ ಮೇಲೆ ಹರಿದಿದೆ. ಪರಿಣಾಮವಾಗಿ ಆಕೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ವಿವಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ವಿವಿ ಕ್ಯಾಂಪಸ್ ಒಳಭಾಗದಲ್ಲಿ ಸಂಬAಧಿಸಿದ ಹಾಗೂ ವಿದ್ಯಾರ್ಥಿಗಳ ವಾಹನಗಳನ್ನು ಹೊರತುಪಡಿಸಿ, ಖಾಸಗಿ ವಾಹನಗಳ ಸಂಚಾರವನ್ನು ನಿಷೇಧೀಸಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಜ್ಞಾನ ಭಾರತಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















