No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ: ಸಿದ್ಧರಾಮಯ್ಯ

kalpa News by kalpa News
December 30, 2021
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಇಂದು ಹೊರಬಿದ್ದಿದೆ. ಚುನಾವಣೆಯಾದ 1187 ಸ್ಥಾನಗಳ ಪೈಕಿ 500 ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು ಕಂಡು ಬರುತ್ತದೆ. ಈ ಫಲಿತಾಂಶ ನಮಗೆ ಖುಷಿ ಕೊಟ್ಟಿದೆ ಎಂದರು.

ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಗೆಲ್ಲುತ್ತೇವೆ ಎಂದು ಬಿಜೆಪಿಯವರು ಜಂಭದಿಂದ ವರ್ತಿಸುತ್ತಾರೆ, ಆದರೆ ಬರೀ ಹಣವೊಂದೆ ಚುನಾವಣೆಯಲ್ಲಿ ಗೆಲ್ಲಲು ಸಾಕಾಗಲ್ಲ. ಜನರ ಪರವಾಗಿ ಕೆಲಸ ಮಾಡಬೇಕು, ಪ್ರಾಮಾಣಿಕ ಆಡಳಿತ ಕೊಡಬೇಕು. ಆಗ ಜನ ಮತ ನೀಡುತ್ತಾರೆ ಎಂದು ಹೇಳಿದರು.

ಈ ಹಿಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಮತ್ತು ಬಿಜೆಪಿ ಎರಡೂ ಪಕ್ಷಗಳು ತಲಾ ಹನ್ನೊಂದು ಸ್ಥಾನಗಳನ್ನು ಗೆದ್ದಿದ್ದರೂ ಕೂಡ ಶೇಕಡಾವಾರು ಮತಗಳ ಪ್ರಮಾಣ ನಮಗೆ ಹೆಚ್ಚು ಬಂದಿದೆ. ನಮಗೆ 48% ಮತ ಬಂದಿದ್ದರೆ, ಬಿಜೆಪಿ ಗೆ 41% ಬಂದಿತ್ತು. ಡಿಸೆಂಬರ್ 27 ರಂದು 1187 ಸ್ಥಾನಗಳಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷ 500 ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 430, ಜೆ.ಡಿ.ಎಸ್ 45, ಇತರೆ 207 ಸ್ಥಾನಗಳನ್ನು ಗೆದ್ದಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಜನ ಭಾವಿಸಿರುವುದು ಕಾಣುತ್ತದೆ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವನ್ನು ನಾನು ಯಾವಾಗಲೂ ಮುಂದಿನ ಚುನಾವಣೆಗಳ ದಿಕ್ಸೂಚಿ ಎಂದು ಹೇಳಲ್ಲ. ಆದರೆ ಇದರಿಂದ ಜನರ ಒಲವು ಯಾರ ಕಡೆಗಿದೆ ಎಂದು ತಿಳಿಯುತ್ತೆ ಎಂಬುದು ನನ್ನ ಅಭಿಪ್ರಾಯ. ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ರೋಸಿ ಹೋಗಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ಜನರ ನಿರೀಕ್ಷೆ ಹುಸಿಯಾಗಿದೆ. ಹೀಗಾಗಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ಗೆದ್ದಿರುವ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದರು.

ಪಕ್ಷ ಇಂದು ಪ್ರಬಲ ಸಂಘಟನೆಯಾಗಿ ಬೆಳೆಯುತ್ತಿದೆ. ಇದನ್ನು ನಾವು ಹೀಗೆಯೇ ಮುಂದುವರೆಸಿಕೊಂಡು ಹೋಗುತ್ತೇವೆ ಜೊತೆಗೆ ಕಾಂಗ್ರೆಸ್ ಪಕ್ಷ ನಮಗೆ ಬೇಕು ಎಂದು ಜನರೇ ಬಯಸುತ್ತಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ನೂರಕ್ಕೆ ನೂರು ಬಹುಮತ ಪಡೆದು ಅಧಿಕಾರ ಹಿಡಿಯುತ್ತದೆ ಎಂದು ಹೇಳಿದರು.

ಹಿಂದೂ ದೇವಾಲಯಗಳನ್ನು ಸರ್ಕಾರ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದರೆ ನಮ್ಮ ತಕರಾರು ಖಂಡಿತಾ ಇಲ್ಲ. ಸಾರಾಸಗಟಾಗಿ ಎಲ್ಲಾ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೊದಲು ದೇವಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಒಮ್ಮೆ ಪರಿಶೀಲಿಸಬೇಕು. ಕಾರಣ ರಾಜ್ಯದ ಸಾಕಷ್ಟು ದೇವಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ, ಅವುಗಳನ್ನು ಸ್ವತಂತ್ರಗೊಳಿಸಿದರೆ ದೇವಾಲಯ ನಡೆಸಿಕೊಂಡು ಹೋಗುವುದು ಕಷ್ಟವಾಗಿ ಉಪಕಾರಕ್ಕಿಂತ ತೊಂದರೆಯೇ ಹೆಚ್ಚಾಗುತ್ತದೆ ಎಂದರು.

ಜನರನ್ನು ಭಾವನಾತ್ಮಕವಾಗಿ ಹಾದಿ ತಪ್ಪಿಸಲು ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನರು ಬುದ್ದಿವಂತರಿದ್ದಾರೆ. ತಾವೇನು ತೀರ್ಮಾನ ಮಾಡಬೇಕು ಅದನ್ನೇ ಜನ ಮಾಡುತ್ತಾರೆ ಎಂದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState NewsVidhanasabhe electionಬೆಂಗಳೂರುವಿಧಾನಸಭಾ ಚುನಾವಣೆಸಿದ್ಧರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.3ರಿಂದ ಕಲಬುರಗಿಯಲ್ಲಿ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನಕ್ಕೆ ಭರದ ಸಿದ್ದತೆ: ಶಿವಾನಂದ ತಗಡೂರು

Next Post

ಹೊಸಪೇಟೆ ನಗರಸಭೆ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗೆದ್ದಿದೆ ಗೊತ್ತಾ? ಇಲ್ಲಿದೆ ಮಾಹಿತಿ

kalpa News

kalpa News

Next Post
ತೀರ್ಥಹಳ್ಳಿ ಪಪಂ: ಹರ್ಷದಲ್ಲಿ ಗೆದ್ದವರು… ಆತಂಕದಲ್ಲಿ ಉಳಿದವರು…

ಹೊಸಪೇಟೆ ನಗರಸಭೆ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗೆದ್ದಿದೆ ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL